ನೆಹರು ಉದ್ಯಾನವನ ನಿರ್ವಹಣೆಗೆ ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ
ಮಡಿಕೇರಿ ಮೇ,06():-ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣವಾಗುತ್ತಿರುವ ನೆಹರು ಉದ್ಯಾನವನ ನಿರ್ಮಾಣ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದ್ದು, ನೆಹರು ಉದ್ಯಾನವನ ನಿರ್ವಹಣೆಗೆ ಅಗತ್ಯ ಕ್ರಮವಹಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜಾಸೀಟು ಅಭಿವೃದ್ಧಿ ಸಮಿತಿಯೇ ನೆಹರು ಉದ್ಯಾನವನ ನಿರ್ವಹಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ನೆಹರು ಉದ್ಯಾನವನದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಗೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡುವುದು, ಉದ್ಯಾನವನದಲ್ಲಿ ಕುಡಿಯುವ ನೀರು ಒದಗಿಸುವುದು, ರಕ್ಷಕರನ್ನು ನಿಯೋಜಿಸುವುದು ಮತ್ತಿತರ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ರಾಜಾಸೀಟು ಉದ್ಯಾನವನ ಸರಿಯಾಗಿ ನಿರ್ವಹಣೆ ಮಾಡದಿರುವುದಕ್ಕೆ ಜಿಲ್ಲಾಧಿಕಾರಿ ಅವರು ತೀವ್ರ ಅಸಮಾದಾನ ವ್ಯಕ್ತಪಡಿಸಿದರು.
ಸಮವಸ್ತ್ರದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸದೇ ಇರುವುದು, ರಕ್ಷಕರನ್ನು ನಿಯೋಜಿಸದೇ ಇರುವುದು ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ರಾಜಾಸೀಟು ಉದ್ಯಾನವನ ನಿರ್ವಹಣೆ ಮಾಡದಿದ್ದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು. ರಾಜಾಸೀಟಿನಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನಿಯೋಜನೆ ಸಂಬಂಧ ಟೆಂಡರ್ ಆಹ್ವಾನಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ದೇವಕಿ ಅವರು ರಾಜಾಸೀಟು ಹಾಗೂ ಉದ್ಯಾನವನದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಪೌರಾಯುಕ್ತರಾದ ಎಂ.ಎಲ್. ರಮೇಶ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ತೋಟಗಾರಿಕೆ ಇಲಾಖೆ ತಾಂತ್ರಿಕ ಸಹಾಯಕರಾದ ಗುರುರಾಜ್, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ರಾಘವೇಂದ್ರ, ರಾಜಾಸೀಟು ಉದ್ಯಾನವನ ಸಿಬ್ಬಂದಿಗಳು ಇತರರು ಇದ್ದರು.

No comments
Post a Comment