ನಿಷೇಧಾಜ್ಞೆ ಜಾರಿ

No comments

ಮಡಿಕೇರಿ ಮೇ,18(ಕರ್ನಾಟಕ ವಾರ್ತೆ):-ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಮತ ಎಣಿಕೆಯು ಮೇ, 23 ರಂದು ನಡೆಯಲಿದ್ದು, ಈ ದಿನದಂದು ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಮತ್ತು 144(ಎ) ಹಾಗೂ ಕರ್ನಾಟಕ ಪೊಲೀಸ್ ಆಕ್ಟ್ 1963ರ ಕಲಂ 35ರಡಿ ದತ್ತವಾದ ಅಧಿಕಾರದಂತೆ ಮೇ, 23 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದುಕೊಂಡು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

No comments

Post a Comment