ಮಡಿಕೇರಿ ಮೇ,15(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕಿ, ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಸೇರ್ಪಡೆಯಾಗಲು ಇಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳ ವಿವರ: ಮಡಿಕೇರಿ ನಗರದ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ(5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ), ನಗರದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ(ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ), ಚೇರಂಬಾಣೆ ಮೆಟ್ರಿಕ್ ಪೂರ್ವ ಬಾಲಕರ ನಿಲಯ(5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ).
ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯಗಳಿದ್ದು ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಹಾಸ್ಟೆಲ್ ಅಡ್‍ಮಿಷನ್ ಅಥವಾ hಣಣಠಿ://ಚಿಜmissioಟಿs.ಞಚಿಡಿ.ಟಿiಛಿ.iಟಿ/hosಣeಟಚಿಜmissioಟಿ ಪೋರ್ಟಲ್‍ನಲ್ಲಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಹಾಗೂ ಬ್ಯಾಂಕ್ ಪಾಸ್‍ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿ ಕಚೇರಿ ದೂ.ಸಂ : 08272-223552 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

No comments
Post a Comment