ಅರ್ಜಿ ಆಹ್ವಾನ

No comments
ಅರ್ಜಿ ಆಹ್ವಾನ

***********
      ಮಡಿಕೇರಿ ಮೇ,15(ಕರ್ನಾಟಕ ವಾರ್ತೆ):-ವಿರಾಜಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2019-20ನೇ ಸಾಲಿಗೆ ದಾಖಲಾಗಲು ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
      ವಿದ್ಯಾರ್ಥಿ ನಿಲಯಗಳ ವಿವರ; ಪೊನ್ನಂಪೇಟೆ, ವಿರಾಜಪೇಟೆ, ಕಾಕೋಟುಪರಂಬು ಮತ್ತು ಬಾಳಲೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳು ಹಾಗೂ ಪೊನ್ನಂಪೇಟೆ, ವಿರಾಜಪೇಟೆ ಮತ್ತು ಪಾಲಿಬೆಟ್ಟ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ.
      ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿ, ಊಟ-ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರೆ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ.  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸಹ ನಿಲಯಗಳಿಗೆ ಪ್ರವೇಶ ಪಡೆಯಲು ಕೂಡ ನಿಯಮಾನುಸಾರ ಅರ್ಹರಾಗಿರುತ್ತಾರೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ  ಪೆÇೀರ್ಟಲ್ ಮೂಲಕ ಜೂನ್, 15 ರೊಳಗೆ ಸಲ್ಲಿಸಿ ನಂತರ ಆನ್‍ಲೈನ್ ಪ್ರತಿಯೊಂದಿಗೆ ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ಮಾಕ್ರ್ಸ್ ಕಾರ್ಡ್‍ನ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ನಿಲಯಗಳ ವಾರ್ಡನ್‍ರವರಿಗೆ ಸಲ್ಲಿಸುವಂತೆ ವಿರಾಜಪೇಟೆ ತಾ. ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

No comments

Post a Comment