ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ 

No comments

ಮಡಿಕೇರಿ ಮೇ.25(ಕರ್ನಾಟಕ ವಾರ್ತೆ):-ಪೊನ್ನಂಪೇಟೆಯ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2019-20ನೇ ಸಾಲಿನ ಐಟಿಐ ತರಬೇತಿಯ ಪ್ರವೇಶಕ್ಕಾಗಿ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎರಡು ವರ್ಷದ ಎಲೆಕ್ಟ್ರಾನಿಕ್ ಮೆಕಾನಿಕ್ ತರಬೇತಿಯನ್ನು ಹಾಗೂ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಭ್ಯರ್ಥಿಗಳಿಗೆ 1 ವರ್ಷದ ತರಬೇತಿಯನ್ನು ನೀಡಲಾಗುತ್ತದೆ. ಪ್ರವೇಶಕ್ಕಾಗಿ ಜೂನ್, 15 ರವರೆಗೆ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು. ಇದರ ಸಂಯೋಜನೆಯನ್ನು ಎನ್‍ಸಿವಿಟಿ ನಡೆಸುತ್ತಿದ್ದು, ಎಸ್‍ಎಸ್‍ಎಲ್‍ಸಿ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ 14 ವರ್ಷದ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೊನ್ನಂಪೇಟೆ ಇವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ 08274-249638 ಅಥವಾ ಮೊಬೈಲ್ ಸಂಖ್ಯೆ 9880252218 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

No comments

Post a Comment