ಮಡಿಕೇರಿ ಮೇ,20(ಕರ್ನಾಟಕ ವಾರ್ತೆ):-ಜಿಲ್ಲೆಯ ಎಲ್ಲಾ ಶಾಲೆ, ವಿದ್ಯಾರ್ಥಿ ನಿಲಯಗಳು ಮತ್ತು ಕಲ್ಯಾಣ ಮಂದಿರಗಳಲ್ಲಿ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಘಟಕಗಳಿಂದ ನೀರಿನ ಜೈವಿಕ ವಿಶ್ಲೇಷಣೆಯನ್ನು ಮಾಡಿ ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು. ಕಳೆದ ಸಭೆಯ ಅನುಪಾಲನಾ ವರದಿಯ ಪ್ರಗತಿ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರಿಂದ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಕಲುಷಿತ ನೀರಿನ ಬಳಕೆಗೆ ಕಡಿವಾಣ ಹಾಕಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಜಿಲ್ಲೆಯಲ್ಲಿ 356 ಕಡೆಗಳಲ್ಲಿ ಬಳಕೆಗೆ ಯೋಗ್ಯವಾದ ಕುಡಿಯುವ ನೀರಿನ ಮೂಲಗಳಿದ್ದು, ಇವುಗಳ ನೀರನ್ನು ಪರೀಕ್ಷಿಸಿ ವರದಿ ಪಡೆದುಕೊಂಡಿರುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿರುವ 17 ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ. ಈ ಮೂಲಗಳ ನೀರಿನ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತಕ್ಕೆ ಹಾಗೂ ನಾಯಿ ಕಡಿತಕ್ಕೆ ಔಷಧದ ಕೊರತೆಯಿರುವುದಿಲ್ಲ ಎಂದು ಅವರು ತಿಳಿಸಿದರು. ಮೇ, 16 ರಂದು ಜಿಲ್ಲೆಯಲ್ಲಿ ಡೆಂಗ್ಯು ನಿಯಂತ್ರಣ ಅರಿವು ಕಾರ್ಯಕ್ರಮ ನಡೆಸಲಾಗಿದ್ದು, ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಡೆಂಗ್ಯು ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸುತ್ತಿರುವುದಾಗಿ ಸಭೆಗೆ ಅವರು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಶಾಲಾ ಮಕ್ಕಳಿಗೆ ಡೆಂಗ್ಯು ಜ್ವರದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ನಡೆಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಿದರೆ ಡೆಂಗ್ಯು ನಿಯಂತ್ರಣಕ್ಕೆ ಉಪಯೋಗವಾಗಲಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ, ಕೈಗಾರಿಕಾ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಾಡಿಗಳಲ್ಲಿ ಹಾಗೂ ಕುಗ್ರಾಮಗಳಲ್ಲಿ ವಾಸಿಸುವ ಜನರಿಗೆ ಡೆಂಗ್ಯು ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಸಭೆ ಆಯುಕ್ತರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಡೆಂಗ್ಯು ನಿಯಂತ್ರಣಕ್ಕೆ ಸ್ವಚ್ಛತಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಡೆಂಗ್ಯು ರೋಗ ಬಾರದಂತೆ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶಿವಕುಮಾರ್, ನಗರಸಭೆ ಆಯುಕ್ತರಾದ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಪರಿಸರ ಅಧಿಕಾರಿ ಗಣೇಶನ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಹೆಚ್ಚಿನ ಮಾಹಿತಿ:-ಡೆಂಗ್ಯು ಜ್ವರ ಎಂದರೆ ವೈರಸ್‍ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ. ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣಗಳು. ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ. ಡೆಂಗ್ಯು ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ರೋಗದ ಹತೋಟಿಗೆ ಮುಖ್ಯ ವಿಧಾನ ;ಈ ಸೊಳ್ಳೆಗಳು ನೀರನ್ನು ಶೇಖರಿಸುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು, ಮಣ್ಣಿನ ಮಡಿಕೆ, ಉಪಯೋಗಿಸಿದ ಒರಳುಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ, ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತಾ ಕ್ರಮ:-ಎಲ್ಲಾ ನೀರಿನ ತೊಟ್ಟಿ, ಡ್ರಮ್ಮು, ಏರ್ ಕೂಲರ್‍ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು, ನೀರು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚುವುದು, ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆ ನೀರಿನ ಚಿಪ್ಪು ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು, ಸ್ವಯಂ ರಕ್ಷಣಾ ವಿಧಾನಗಳಿಂದ ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸುವುದು.
ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ

No comments
Post a Comment