ಮಡಿಕೇರಿ ಮೇ,18(ಕರ್ನಾಟಕ ವಾರ್ತೆ):-2019-20ನೇ ಸಾಲಿನ ಮಡಿಕೇರಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಮೂರ್ನಾಡು, ಪಾರಾಣೆ, ಸಂಪಾಜೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಪಟ್ಟಣ ಇಲ್ಲಿಗೆ ಪ್ರವೇಶ ಕೋರಿ 5ನೇ ತರಗತಿಯಿಂದ 10 ನೇ ತರಗತಿವರೆಗೆ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ-1, 2ಎ,2ಬಿ,3ಎ,3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಪ್ರವರ್ಗ-1, 2ಎ,2ಬಿ,3ಎ,3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಶಿಷ್ಟ ಪಂಗಡಗಳಿಗೆ ಸೇರಿದ 5ನೇ ತರಗತಿಯಿಂದ 10ನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ. ಪ್ರವರ್ಗ-1ರ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ.1.00 ಲಕ್ಷಗಳು ಹಾಗೂ 2ಎ. 2ಬಿ, 3ಎ, 3ಬಿಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ.44500 ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಆದಾಯ ಮಿತಿ ರೂ.2.00 ಲಕ್ಷಗಳಾಗಿರುತ್ತದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧ ಪಟ್ಟ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಭ್ಯರ್ಥಿಯ 4 ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟದ ಜೆರಾಕ್ಸ್ ಪ್ರತಿ, ವಾಸ ದೃಡೀಕರಣ ಪತ್ರ, ಆದಾರ್ ಕಾರ್ಡ್‍ನ ಪ್ರತಿ, ಜಾತಿ ಮತ್ತು ಆದಾಯ ದೃಡೀಕರಣ ಪತ್ರ ಹಿಂದಿನ ತರಗತಿಯ ದೃಡೀಕೃತ ಅಂಕಪಟ್ಟಿಯ ನಕಲು ಹಾಗೂ ಸ್ಯಾಟ್ಸ್ ಸಂಖ್ಯೆಯನ್ನು ಅರ್ಜಿಯ ಮೇಲೆ ಕಡ್ಡಾಯವಾಗಿ ನಮೂದಿಸಿ ಜೂನ್, 15 ರ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳ ನಿಲಯ ಮೇಲ್ವಿಚಾರಕರು ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿರವರಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಕವಿತಾ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯತ್ ಹತ್ತಿರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಹತ್ತಿರ, ಮಡಿಕೇರಿ ದೂರವಾಣಿ ಸಂಖ್ಯೆ:08272-298037, ಮೊಬೈಲ್ ನಂಬರ್ 9448205919 ನ್ನು ಸಂಪರ್ಕಿಸಬಹುದು.
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

No comments
Post a Comment