ನಾಳೆ ವಿರಾಜಪೇಟೆ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

No comments

ಮೇ, 10 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ :ವಿರಾಜಪೇಟೆ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ವಿರಾಜಪೇಟೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ವಿರಾಜಪೇಟೆ, ಬೊಯೀಕೇರಿ, ಚಿಕ್ಕಪೇಟೆ ಜಂಕ್ಷನ್, 

ಬೀರಂಗಾಡು ಲೇಹೌಟ್, ಕದನೂರು, ಭಗವತಿ ದೇವಸ್ಥಾನ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

No comments

Post a Comment