ನವದೆಹಲಿ : ಮೈತ್ರಿ ಸರ್ಕಾರದ ಬಗ್ಗೆ ಗೊಂದಲದ ಹೇಳಿಕೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆ ನಂತರ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.
ಇದುವರೆಗೆ ಲೋಕಸಭಾ ಚುನಾವಣೆ ಮುಗಿಯಲಿ ಅಂತಾ ಸುಮ್ಮನಿದ್ದೆವು.ಆದರೆ ಇದನ್ನು ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ನಮ್ಮದು ಸ್ಥಿರ ಸರ್ಕಾರ. ಈ ಬಗ್ಗೆ ಯಾರಿಗೂ ಅನುಮಾನ ಬೇಡ, ಕೇಂದ್ರದಲ್ಲಿ ಬಿಜೆಪಿ ಹೊರತುಪಡಿಸಿದ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಪಕ್ಷದ ಎಲ್ಲಾ ನಾಯಕರಿಗೂ ಬಹಿರಂಗ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎಂದರು.

No comments
Post a Comment