ಕಕ್ಕಬ್ಬೆ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

No comments

ಕಕ್ಕಬೆ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
     ಮಡಿಕೇರಿ ಮೇ,15(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಕಕ್ಕಬೆ ವಸತಿ ಶಾಲೆಗೆ 1 ರಿಂದ 5ನೇ ತರಗತಿವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಉಚಿತವಾಗಿ ಸಮವಸ್ತ್ರ, ಬ್ಯಾಗ್, ದಾಖಲಾತಿ(ಶುಲ್ಕ ರಹಿತ), ಲೇಖನ ಸಾಮಗ್ರಿ, ಹಾಸ್ಟೇಲ್ ಸೌಲಭ್ಯ ಇರುತ್ತದೆ. ಮೆನು ಪ್ರಕಾರ ಪೌಷ್ಠಿಕ ಆಹಾರ ಪೂರೈಕೆ, ನುರಿತ ಶಿಕ್ಷಕರಿಂದ ಬೋಧನೆ, ತಿಂಗಳಿಗೆ ಉಚಿತ ಶುಚಿ ಸಂಭ್ರಮ ಕಿಟ್ (ಸೋಪು, ಪೇಸ್ಟ್, ಬ್ರಷ್, ತೆಂಗಿನೆಣ್ಣೆ), ಆರೋಗ್ಯ ತಪಾಸಣೆ ನಡೆಸಲಾಗುವುದು.
    ಆಸಕ್ತ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರು, ವಸತಿ ಶಾಲೆ, ಕಕ್ಕಬೆ, ಮಡಿಕೇರಿ ತಾಲ್ಲೂಕು ಇಲ್ಲಿಂದ ಅರ್ಜಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
     ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ : 08272-223552 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

No comments

Post a Comment