ಬೆಂಗಳೂರು : ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ. ಹೌದು, ಯಡಿಯೂರಪ್ಪ ಅವರ ಹೇಳಿಕೆ ವಿರೋಧಿಸಿ ಬಿಎಸ್ವೈ ವಿರುದ್ಧ ಚುನಾವಣಾ ಆಯೋಗಕ್ಕೆರ ದೂರು ನೀಡಲಾಗಿದೆ.
ಕಾಂಗ್ರೆಸ್ ಗೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ಪ್ರಚಾರದ ವೇಳೆ ಬಿಎಸ್ವೈ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಯಡಿಯೂರಪ್ಪ ಅವರು ಸಮುದಾಯವನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ. ಅಲ್ಲದೇ ಜಾತಿಯಾಧಾರಿತ ಪ್ರವೋಕ್ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿ ನಿಲುವಾಗಿದೆ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲಂಘಿಸಿದಂತಾಗಿದೆ. ಹಾಗಾಗಿ ಬಿಎಸ್ವೈ ವಿರುದ್ಧ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ಸಿಗರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

No comments
Post a Comment