ವಿಪತ್ತನ್ನು ಸಮಯ ಪ್ರಜ್ಞೆಯಿಂದ ಎದುರಿಸಿ: ಸುಮನ್ ಡಿ.ಪೆನ್ನೇಕರ್
ಮಡಿಕೇರಿ :ಅನಿರೀಕ್ಷಿತವಾಗಿ ಬರುವ ವಿಪತ್ತನ್ನು ಸಮಯ ಪ್ರಜ್ಞೆಯಿಂದ ಎದುರಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ.
ಪೊಲೀಸ್ ಘಟಕ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಡಿಕೇರಿ :ಅನಿರೀಕ್ಷಿತವಾಗಿ ಬರುವ ವಿಪತ್ತನ್ನು ಸಮಯ ಪ್ರಜ್ಞೆಯಿಂದ ಎದುರಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ.
ಪೊಲೀಸ್ ಘಟಕ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ದುರಂತವನ್ನು ಅರಿತುಕೊಂಡು ಈ ವರ್ಷ ಸಾಕಷ್ಟು ಸಿದ್ಧ್ದತೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ಥರನ್ನು ಸ್ಥಳಾಂತರ ಮಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಒಂದು ವಾರಗಳ ಕಾಲ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ 15 ಮಂದಿ ಪೊಲೀಸ್ ಸಿಬ್ಬಂದಿಗಳ ಮೂರು ತಂಡವನ್ನು ರಚಿಸಲಾಗಿದೆ. ಹಾಗೆಯೇ ಡಿಎಆರ್‍ನ ಒಂದು ತಂಡ ಸೇರಿದಂತೆ ಒಟ್ಟು 60 ಜನ ಸಿಬ್ಬಂದಿಗಳ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ವರ್ಷದಲ್ಲಿ ಸಂಭವಿಸಬಹುದಾದ ಭೂಕುಸಿತ ಹಾಗೂ ಪ್ರವಾಹ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ಎದುರಿಸುವಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಅವರು ಹೇಳಿದರು.
ಚಂಡಮಾರುತ, ಭೂಕಂಪಗಳನ್ನು ಮುಂಚಿತವಾಗಿಯೇ ವೈಜ್ಞಾನಿಕವಾಗಿ ತಿಳಿದುಕೊಳ್ಳಬಹುದು. ಆದರೆ ನೈಸರ್ಗಿಕ ವಿಕೋಪಗಳಾದ ಪ್ರವಾಹ ಮತ್ತು ಭೂ ಕುಸಿತ ತಿಳಿಯುವುದು ಕಷ್ಟಸಾಧ್ಯ ಎಂದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾತನಾಡಿ ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ಅವರು ಹೇಳಿದರು.
ಬೆಂಗಳೂರಿನ ಟೀಂ ಸೃಷ್ಠಿ ಅಡ್ವೆಂಚರ್ಸ್ ಸಂಸ್ಥೆಯ ತಜ್ಞರಾದ ಸಂತೋಷ್, ಅಕ್ಷಿತಾ ಮತ್ತು ಅನಘಾ ಹಾಗೂ ಪೂನಾದ ಆರ್.ಟಿ.ಜಿಯೋ ಮತ್ತು ಪರಿಸರ ಸಮನ್ವಯ ಸಂಸ್ಥೆಯ ಭೂವಿಜ್ಞಾನಿ ರೆನಿ ಥಾಮಸ್ ಅವರ ತಜ್ಞರ ತಂಡವು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡುತ್ತಿದೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಕೆ.ಎಸ್.ಸುಂದರರಾಜ್, ಮಡಿಕೇರಿ ನಗರ ವೃತ್ತ ನಿರೀಕ್ಷಕ ನಾಗೇಗೌಡ, ಡಿಎಸ್‍ಬಿ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಡಿಸಿಆರ್‍ಬಿ ನಿರೀಕ್ಷಕ ಇರ್ಷಾದ್ ಅಹಮದ್, ಡಿಸಿಐಬಿ ನಿರೀಕ್ಷಕ ನಾಗೇಶ್ ಹಾಗೂ ಡಿಎಆರ್‍ನ ಆರ್‍ಪಿಐ ರಾಚಯ್ಯ ಇತರರರು ಇದ್ದರು.
ಪ್ರಕೃತಿ ವಿಕೋಪ ಎದುರಿಸಲು ತಯಾರಿ ಅಗತ್ಯ: ಡಾ.ಜೆ.ಆರ್.ಪರಮೇಶ್
ಮಡಿಕೇರಿ ಮೇ,09(ಕರ್ನಾಟಕ ವಾರ್ತೆ):-ಜಿಲ್ಲಾಡಳಿತ ಹಾಗೂ ವಿಕೋಪ ನಿರ್ವಹಣಾ ಕೇಂದ್ರ, ಆಡಳಿತ ತರಬೇತಿ ಸಂಸ್ಥೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ, ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧ್ದತೆ ಹಾಗೂ ಸ್ಪಂದನೆ ಯೋಜನೆ ಬಗ್ಗೆ ಎರಡು ದಿನದ ತರಬೇತಿ ಉಪನ್ಯಾಸ ಕಾರ್ಯಾಗಾರವು ನಡೆಯಿತು.
ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಡಾ.ಜೆ.ಆರ್.ಪರಮೇಶ್ ಅವರು ಮಾತನಾಡಿ ಕಳೆದ ಬಾರಿ ಕೊಡಗು ತೀವ್ರ ಅತೀವೃಷ್ಟಿಯಿಂದಾಗಿ ಹಲವು ಹಾನಿ ಸಂಭವಿಸಿದ್ದು, ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಬೇಕಾಗಿದೆ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ನಿಯೋಜಿಸುವ ಮೂಲಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸುವುದು ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ವಿಪತ್ತು ತಡೆಗಟ್ಟುವಿಕೆ, ವಿಪತ್ತಿನ ಸಂದರ್ಭದಲ್ಲಿ ಸೂಕ್ತ ಸ್ಪಂದನೆ ಹಾಗೂ ಪುನರ್ವಸತಿ ಕಲ್ಪಿಸುವಲ್ಲಿ ಯೋಜನೆಯು ಹೇಗೆ ಉಪಯುಕ್ತವಾಗುತ್ತದೆ, ಮಾಹಿತಿಗಳನ್ನು ಹೇಗೆ ಕ್ರೋಢಿಕರಿಸಬೇಕು, ವಿಪತ್ತು ಯೋಜನೆ ಸಿದ್ಧ್ದಪಡಿಸುವ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಪಾಯಗಳ ಬಗ್ಗೆ ಗುರುತಿಸಿಕೊಂಡು ವಿಪತ್ತಿನ ಸಂದರ್ಭದಲ್ಲಿ ಸೂಕ್ತ ಸ್ಪಂದನೆ ಹಾಗೂ ಪುನರ್ವಸತಿ ಯೋಜನೆ ರೂಪಿಸಬೇಕು ಎಂದರು.
ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರದವರು ವಿಪತ್ತು ನಿರ್ವಹಣಾ ಯೋಜನೆಗೆ ಸಿದ್ಧ್ದಪಡಿಸಿರುವ ಮಾರ್ಗದರ್ಶಿ ಆಧಾರದ ಮೇಲೆ ಸೂಕ್ತ ನಮೂನೆಗಳನ್ನು ಕಾರ್ಯಾಗಾರದಲ್ಲಿ ಪರಿಚಯಿಸಿದರು. ಜಿಲ್ಲೆಯಲ್ಲಿ ತುರ್ತು ನಿರ್ವಹಣಾ ಕೇಂದ್ರಗಳನ್ನು ದಿನದ 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಮಾಡಬೇಕು.



No comments
Post a Comment