ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ

No comments

ಬೆಂಗಳೂರು, ಮೇ 07 : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಬೆಂಗಳೂರಲ್ಲಿ ಸುಮಾರು 4.30 ರ ವೇಳೆಗೆ ಆರಂಭವಾದ ಮಳೆ ರಾತ್ರಿಯವರೆಗೂ ಮುಂದುವರೆದಿದ್ದು ಹಲವು ಅನಾಹುತಗಳನ್ನು ಸೃಷ್ಟಿಸಿದೆ. ಬಾರಿ ಮಳೆಯಿಂದಾಗಿ ನಗರದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.
ಮಳೆಯ ಜೊತೆ ಬಾರಿ ಗಾಳಿ ಬೀಸಿದ್ದು ಹಲವು ಪ್ರದೇಶದಲ್ಲಿ ಮರಗಳು ಧರೆಗುರುಳಿವೆ. ವಿವಿಧ ಬಡಾವಣೆಗಳಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.ಭಾರಿ ಗಾಳಿ ಬೀಸಿದ್ದರಿಂದ ನಗರದಲ್ಲಿ ಅನೇಕ ಕಡೆ ಮರಗಳು ಧರೆಗುರುಳಿದ್ದು ವಾಹನಗಳು ಜಖಂಗೊಂಡಿವೆ, ಕೆಲವೆಡೆ ವಿದ್ಯುತ್ ಕಂಬಗಳೂ ಕೂಡ ಧರೆಗುರಿಳಿದರೆ, ಇನ್ನು ಕೆಲವೆಡೆ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿದೆ.
ಬೆಂಗಳೂರಿನ ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಎಂಜಿ ರಸ್ತೆ, ಮಲ್ಲೇಶ್ವರ, ರಾಜಾಜಿನಗರ, ಶ್ರೀನಿವಾಸನಗರ, ಹನುಮಂತನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್‌, ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿಯೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಇನ್ನು ಮುಂದಿನ ಎರಡು ಮೂರು‌ ದಿನಗಳ ಕಾಲ ರಾಜ್ಯದ ಕೆಲವೆಡೆ ಕೆಲವು ಕಡೆಗಳಲ್ಲಿ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.

No comments

Post a Comment