ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ




  •  ಮಡಿಕೇರಿ :-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಿಗೆ 2019-20ನೇ ಸಾಲಿನಲ್ಲಿ 1 ನೇ ತರಗತಿಯಿಂದ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿವೇತನ ಹಾಗೂ ತತ್ಸಮಾನ ಪರೀಕ್ಷೆಗಳಲ್ಲಿ ಶೇ.60 ಕ್ಕೂ ಹೆಚ್ಚು ಅಂಕಗಳಿಸಿದ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಎಸ್‍ಎಸ್‍ಎಲ್‍ಸಿ ಮತ್ತು ನಂತರ ವ್ಯಾಸಂಗ ಮಾಡುತ್ತಿರುವ ಶೇ.40 ಕ್ಕಿಂತ ಹೆಚ್ಚು ದೃಷ್ಟಿ ದೋಷವಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಎಸ್‍ಎಸ್‍ಎಲ್‍ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಮತ್ತು ಔದ್ಯೋಗಿಕ ಶಿಕ್ಷಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣದ ಶುಲ್ಕ ಮರುಪಾವತಿ ಮಾಡುವ ಯೋಜನೆ, ಸ್ಪರ್ಧಾ ಚೇತನ ಹಾಗೂ 20 ವರ್ಷ ಮೇಲ್ಪಟ್ಟ ವಿಕಲಚೇತನ ವಿದ್ಯಾರ್ಥಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ನೀಡುವ ಯೋಜನೆಗಳಿದ್ದು, ಈ ಯೋಜನೆಗಳಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ ಸಂಖ್ಯೆ:08272-222830 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಮಕ್ಕಳ ಸುರಕ್ಷತೆ ಕಡೆ ವಿಶೇಷ ಕಾಳಜಿ ವಹಿಸಿ: ಸುಂದರ ರಾಜ್ 



  • ಮಡಿಕೇರಿ -ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸುವುದು ಪೋಷಕರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಪೋಷಕರು ವಿಶೇಷ ಕಾಳಜಿ ವಹಿಸುವಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸುಂದರರಾಜ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ, ಪೊಲೀಸ್, ಪ್ರಾದೇಶಿಕ ಸಾರಿಗೆ ಇಲಾಖೆಗಳ ಸಹಯೋಗದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ಮಕ್ಕಳ ಸುರಕ್ಷತೆ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ನಡೆದ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಕಳುಹಿಸುವ ಸಂದರ್ಭದಲ್ಲಿ ಒಂದು ವಾಹನದಲ್ಲಿ ಎಷ್ಟು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂಬುದನ್ನು ಗಮನಿಸಬೇಕು ಎಂದರು. ಶಾಲೆಗೆ ಕಳುಹಿಸುವ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸುವಂತಾಗಬೇಕು. ಶಾಲಾ ಮಕ್ಕಳನ್ನು ನಿರ್ದಿಷ್ಟ ವಾಹನದಲ್ಲಿ ಇಂತಿಷ್ಟು ಆಸನ ವ್ಯವಸ್ಥೆ ಇರುವ ವಾಹನದಲ್ಲಿ ಕರೆದುಕೊಂಡು ಹೋಗಬೇಕು ಎಂದರು. ಶಾಲೆಗಳಲ್ಲಿ ಪೋಷಕರ ಸಭೆಯನ್ನು ಕಾಲ ಕಾಲಕ್ಕೆ ನಡೆಸಬೇಕು. ಮಕ್ಕಳನ್ನು ಶಾಲೆಗೆ ಸಿದ್ಧತೆ ಮಾಡಿ ಕಳುಹಿಸುವುದರ ಜೊತೆಗೆ ಸುರಕ್ಷತೆಯಿಂದ ಕರೆದುಕೊಂಡು ಹೋಗುತ್ತಾರೆಯೇ ಎಂಬುದನ್ನು ಪೋಷಕರು ಗಮನಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಂದರ ರಾಜ್ ಅವರು ಹೇಳಿದರು. ಅಗ್ನಿಶಾಮಕ ಇಲಾಖೆಯ ಅಧಿಕಾರಿ ಚಂದನ್ ಅವರು ವಾಹನಗಳಲ್ಲಿ ಬೆಂಕಿ ಅವಘಡಗಳನ್ನು ತಡೆಯುವುದು, ವಾಹನ ಸುರಕ್ಷತೆ ಕಡೆ ಗಮನ ಹರಿಸುವುದು ಮತ್ತಿತರ ಬಗ್ಗೆ ಮಾಹಿತಿ ನೀಡಿದರು. ಪ್ರಾದೇಶಿಕ ಸಾರಿಗೆ ಕಚೇರಿಯ ವ್ಯವಸ್ಥಾಪಕರಾದ ಶಿವಣ್ಣ ಅವರು ಆಟೋ ರಿಕ್ಷಾಗಳಲ್ಲಿ 6 ವಿದ್ಯಾರ್ಥಿಗಳಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಮೋಟಾರು ವಾಹನ ಕಾಯ್ದೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಇಲ್ಲದಿದ್ದಲ್ಲಿ 2 ರಿಂದ 5 ಸಾವಿರವರೆಗೆ ದಂಡ, ಜೊತೆಗೆ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ತಾವು ಕಳುಹಿಸುವ ವಾಹನದಲ್ಲಿ ವಾಹನ ಸುರಕ್ಷತೆ ಬಗ್ಗೆ ಹಾಗೂ ದಾಖಲೆಗಳು ಕ್ರಮಬದ್ಧವಾಗಿವೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಶಿವಣ್ಣ ಅವರು ಸಲಹೆ ಮಾಡಿದರು. ಕಾನೂನು ಅರಿತು ನಡೆಯಬೇಕು ಮತ್ತು ಪಾಲಿಸಬೇಕು. ವಾಹನ ಚಾಲಕರಿಗೆ ಕನಿಷ್ಠ 5 ವರ್ಷ ವಾಹನ ಚಾಲನಾ ಅನುಭವವಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ವಾಹನ ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಗಮನಿಸಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಪೋಷಕರು ಇತರರು ಇದ್ದರು.

ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತಿಸಿ: ಸುಮನ್ ಡಿ.ಪೆನ್ನೇಕರ್   




  • ಮಡಿಕೇರಿ:ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆಯು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾದಕ ವಸ್ತುಗಳಾದ ಡ್ರಗ್ಸ್, ಹೆರಾಯಿನ್, ಬ್ರೌನ್ ಶುಗರ್ ಮತ್ತಿತರ ದ್ರವ್ಯಗಳ ಚಟಕ್ಕೆ ತುತ್ತಾಗಬಾರದು, ಯುವ ಜನರು ತಮ್ಮ ಜೀವನವನ್ನು ಹಸನು ಮಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು. ಮಾನವನ ಜೀವನ ಅತ್ಯಂತ ಅಮೂಲ್ಯ, ಆದ್ದರಿಂದ, ಜೀವನದಲ್ಲಿ ಭವಿಷ್ಯದಲ್ಲಿ ಉತ್ತಮ ಗುರಿಯನ್ನು ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಅವರು ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ ಅವರು ಮಾತನಾಡಿ ವಿದ್ಯಾರ್ಥಿಗಳು ಅತೀ ಹೆಚ್ಚು ಮಾದಕ ವಸ್ತುಗಳ ಸೇವನೆ ಹಾಗೂ ಹೆಚ್ಚು ಅಪರಾಧಗಳಲ್ಲಿ ತೊಡಗಿರುವುದು ಬೇಸರದ ಸಂಗತಿಯಾಗಿದೆ. ಯುವಜನತೆ ಹಾಗೂ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ಇದರಿಂದ, ಜೀವನ ಉತ್ತಮವಾಗಿರುತ್ತದೆ. ಪೋಷಕರ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ವಿದ್ಯಾರ್ಥಿಗಳು ಸತತ ಪ್ರಯತ್ನಿಸಬೇಕು ಎಂದರು. ಮಾದಕ ವಸ್ತುಗಳಿಗೆ ತುತ್ತಾಗಿ ಹಲವರು ಬಲಿಯಾಗುತ್ತಿದ್ದಾರೆ. ಜೊತೆಗೆ ಅಪರಾಧ ಪ್ರಕರಣಗಳಲ್ಲಿಯೂ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. 15 ರಿಂದ 30 ವರ್ಷದೊಳಗಿನ ಯುವಜನರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್ ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಗುರಿಯಾದರೆ ಜೀವನದ ಗುರಿಯನ್ನು ನಾಶ ಪಡಿಸಿಕೊಂಡಂತೆ. ಆದ್ದರಿಂದ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಬೇಕು ಎಂದು ಅವರು ತಿಳಿಸಿದರು. ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿ ಮಾದಕವಸ್ತುಗಳ ಚಟಕ್ಕೆ ದಾಸರಾಗಬೇಡಿ ಎಂದರು. ಮಾದಕ ವಸ್ತುಗಳನ್ನು ಉಪಯೋಗಿಸುವುದರಿಂದ ರಕ್ತ ಸಂಬಂಧಿ ಕಾಯಿಲೆಗಳಾದ ಎಚ್‍ಐವಿ ಏಡ್ಸ್ ಮತ್ತು ಹೆಪಟೈಟಿಸ್, ಮನೋರೋಗ, ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು, ಮೂರ್ಛೆ ಹೋಗುವುದು, ಭ್ರಮೆ ಉಂಟಾಗಬಹುದು ಎಂದರು. ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯವನ್ನು ಕುಂಠಿತಗೊಳಿಸುತ್ತದೆ. ಮಾದಕ ವಸ್ತುಗಳ ಬಳಕೆಗೆ ಇಳಿದವರು ದೈನಂದಿನ ಚಟುವಟಿಕೆಗಳಲ್ಲಿ ನಿರಾಸಕ್ತಿ, ಅನವಶ್ಯಕ ವಿವಾದಗಳನ್ನು ಸೃಷ್ಠಿಸುವುದು ಮೊದಲಾದ ಸಮಾಜ ವಿರೋಧಿ ಕಾರ್ಯಗಳಲ್ಲಿ ತೊಡಗುವುದು ಕಂಡು ಬರುತ್ತದೆ. ಆದ್ದರಿಂದ ಇದರಿಂದ ದೂರವಿರಬೇಕು ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ನಿರೀಕ್ಷಕರಾದ ಕೆ.ಎಸ್.ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಕೆ ಮೋಹನ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಬಾಬು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಆರ್.ಸಂಪತ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಡಿ.ತಿಮ್ಮಯ್ಯ, ಹಾಗೂ ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿನಿ ಲಿಖಿತಾ ಪ್ರಾರ್ಥಿಸಿದರು. ರಾಜಶೇಖರ್ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.

ತಂದೆಯ ಟೀಶರ್ಟಿನೊಳಗೆ ಪ್ರಾಣಬಿಟ್ಟ ಮಗಳು: ನಿರಾಶ್ರಿತ ಪಲಾಯನದ ಕರುಳು ಹಿಂಡುವ ದುರಂತ ಚಿತ್ರ



  • ಮೆಕ್ಸಿಕೊ ಸಿಟಿ: ಅನಧಿಕೃತ ನಿರಾಶ್ರಿತರ ವಲಸೆಯನ್ನು ತಡೆಯಲು ಅಮೆರಿಕ ಬಿಗಿ ಕ್ರಮ ಕೈಗೊಳ್ಳುತ್ತಿದ್ದು ಈ ನಡುವೆ ಹೃದಯ ಭೇದಕವಾದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮೆಕ್ಸಿಕೊ ಅಮೆರಿಕ ಗಡಿಯಲ್ಲಿ ಅಮೆರಿಕ ನಿಯಂತ್ರಣವನ್ನು ಹೊಂದಿದ ರಿಯೊ ಗ್ರಾಂಡ್ ನದಿಯಲ್ಲಿ ಸಾಲ್ವಡೋರಿನ ವ್ಯಕ್ತಿ ಮತ್ತು ಅವರ ಎರಡು ವರ್ಷಗಳ ಪುತ್ರಿಯ ಮೃತದೇಹ ತೇಲಾಡುತ್ತಿರುವ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಆಸ್ಕರ್ ಅಲ್ಬರ್ಟ್ ಮತ್ತು ಅವರ ಪುತ್ರಿ ವಲೇರಿಯ ಮೃತಪಟ್ಟವರಾಗಿದ್ದು ಸೋಮವಾರ ಇವರ ಮೃತದೇಹ ಪತ್ತೆಯಾಗಿದ್ದು ಮೆಕ್ಸಿಕೊದ ಪತ್ರಿಕೆಯಲ್ಲಿ ಚಿತ್ರ ಪ್ರಕಟವಾಗಿತ್ತು. ನದಿಯಲ್ಲಿ ಇಬ್ಬರ ಮೃತದೇಹಗಳು ಬೋರಲಾಗಿ ಬಿದ್ದುಕೊಂಡಿತ್ತು. ತಂದೆಯ ಟೀಶರ್ಟಿನೊಳಗೆ ಪುಟ್ಟ ಬಾಲಕಿ ತೂರಿಕೊಂಡ ಸ್ಥಿತಿಯಲ್ಲಿ ಮೃತದೇಹವಿದೆ. ಎಷ್ಟು ಅಪಾಯಕಾರಿ ದಾರಿಯ ಮೂಲಕ ಸುರಕ್ಷಿತ ಸ್ಥಳವನ್ನು ಹುಡುಕಿ ಇವರೆಲ್ಲ ಅಮೆರಿಕಕ್ಕೆ ಬರಲು ಯತ್ನಿಸುತ್ತಿದ್ದಾರೆ ಎನ್ನುವ ದಾರುಣ ಅವಸ್ಥೆಯನ್ನು ಈ ಚಿತ್ರ ಬಹಿರಂಗಗೊಳಿಸುತ್ತಿದೆ. ಪುತ್ರಿಯನ್ನು ಕರೆದುಕೊಂಡು ನದಿ ಈಜಿ ದಾಟಲು ಆಸ್ಕರ್ ಆಲ್ಬರ್ಟ್ ಯತ್ನಿಸಿದ್ದರು. ನದಿಯ ಬದಿ ಮಗಳನ್ನು ನಿಲ್ಲಿಸಿ ಪತ್ನಿಯನ್ನು ಕರೆದುಕೊಂಡು ಹೋಗಲು ಆಸ್ಕರ್ ಮರಳಿ ಈಜುತ್ತಿದ್ದರು ಎಂದು ಅವರ ತಾಯಿ ಹೇಳಿದರು. ಈ ನಡುವೆ ನದಿಗೆ ಬಿದ್ದ ವಲೇರಿಯಳನ್ನು ಮೇಲೆ ತರಲು ಆಲ್ಬರ್ಟ್‍ಗೆ ಸಾಧ್ಯವಾಗಲಿಲ್ಲ. ವಲೇರಿಯ ನೀರಿನ ಸುಳಿಗೆ ಸಿಕ್ಕಿ ಆಳಕ್ಕೆ ಹೋಗಿದ್ದಳು. ಮಗಳನ್ನು ರಕ್ಷಿಸಲು ಯತ್ನಿಸುವ ವೇಳೆ ಇಬ್ಬರೂ ಸುಳಿಯಲ್ಲಿ ಸಿಕ್ಕಿ ಮೃತಪಟ್ಟಿದ್ದರು. ಐಲನ್ ಕುರ್ದಿ ಎಂಬ ಮೂರು ವರ್ಷದ ಬಾಲಕ ಸಮುದ್ರ ಬದಿಯಲ್ಲಿ ಬೋರಲಾಗಿ ಬಿದ್ದ ಚಿತ್ರ ಈ ಹಿಂದೆ ಜಗತ್ತಿನಾದ್ಯಂತ ಕಂಪನ ಸೃಷ್ಟಿಸಿತ್ತು. ಆಲ್ಬರ್ಟ್ ಮತ್ತು ವಲೇರಿಯಾಳ ಚಿತ್ರ ಇದೇ ಅನುಭವವನ್ನು ನೆನಪಿಸುತ್ತಿದೆ. ಈ ಘಟನೆಯ ಫೋಟೋವನ್ನು ಜೂಲಿಯ ಲೆ ಡ್ಯೂಕ್ ತೆಗೆದಿದ್ದಾರೆ. 

ಪರಿಶಿಷ್ಟ ಜಾತಿ/ ಪಂಗಡದ ಅರ್ಹ ಫಲಾನುಭವಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಡಿಸಿ 



ಮಡಿಕೇರಿ :-ಅರಣ್ಯ ಹಕ್ಕು ಕಾಯ್ದೆಯಡಿ ಜಿಲ್ಲೆಯ ಅರಣ್ಯ ವಾಸಿಗಳಿಗೆ ಸಮರ್ಪಕ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮ ರೀತ್ಯಾ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಸ್ಮಶಾನಕ್ಕೆ ಬದಲಿ ಪರ್ಯಾಯ ಜಾಗ ಗುರುತಿಸುವಂತೆ ವಿರಾಜಪೇಟೆ ತಹಶೀಲ್ದಾರರಿಗೆ ಸೂಚನೆ ನೀಡಿದರು. ಸೋಮವಾರಪೇಟೆ ತಾಲ್ಲೂಕಿನ ನಿಡ್ತ ಗ್ರಾ.ಪಂ.ವ್ಯಾಪ್ತಿಯ ಸ್ಮಶಾನದ ಸಮಸ್ಯೆಗೆ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಸೋಮವಾರಪೇಟೆ ತಾ.ಪಂ.ಇಒಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಕಳೆದ ಬಾರಿ ನಡೆದ ಸಭೆಯ ಅನುಪಾಲನಾ ವರದಿ ಪ್ರಗತಿ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ಪಡೆದರು. ಜೇನು ಕುರುಬರಿಗೆ ಅವಶ್ಯವಿರುವ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ದಿಸೆಯಲ್ಲಿ ಅಗತ್ಯ ಕ್ರಮಕೈಗೊಂಡು ಕೃಷಿ ಚಟುವಟಿಕೆಗಳಿಗೆ ನೆರವು ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಅರಣ್ಯ ಹಕ್ಕು ಕಾಯ್ದೆಯಡಿ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಿ ಅರ್ಹ ಅರಣ್ಯ ವಾಸಿಗಳಿಗೆ ಅನುಕೂಲವಾಗಬೇಕು. ಹಲವು ದಶಕಗಳಿಂದ ಅರಣ್ಯದಲ್ಲಿಯೇ ವಾಸವಿರುವ ಮೂಲ ನಿವಾಸಿಗಳ ಹಕ್ಕುಗಳ ರಕ್ಷಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಐಟಿಡಿಪಿ ಅಧಿಕಾರಿ ಶಿವಕುಮಾರ್‍ಗೆ ತಿಳಿಸಿದರು. ಸಮಿತಿಯ ಸದಸ್ಯರಾದ ಮುತ್ತಪ್ಪ ಅವರು ಮಾತನಾಡಿ ನಾಪೋಕ್ಲು ಪಂಚಾಯತ್ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಹಾಡಿಗಳಲ್ಲಿ ವಿದ್ಯುತ್ ಸಮಸ್ಯೆಯನ್ನು ನಿವಾರಿಸಬೇಕು. ಹಾಡಿಯ ಪ್ರದೇಶಕ್ಕೆ ಸಂಚಾರಿ ನ್ಯಾಯಬೆಲೆ ಅಂಗಡಿ, ರಸ್ತೆ ವ್ಯವಸ್ಥೆ, ಅಂಬೇಡ್ಕರ್ ಭವನ ಹಾಗೂ 94 ಸಿಸಿ ರಡಿಯಲ್ಲಿ ಹಕ್ಕು ಪತ್ರ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ವ್ಯಾಪ್ತಿಯಲ್ಲಿ ಇರುವ ಹಾಡಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ತುರ್ತಾಗಿ ಅವಶ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಮಿತಿಯ ಸದಸ್ಯರಾದ ಸುಕುಮಾರ್, ಜೇನುಕುರುಬರ ಕೆಂಪ ಅವರು ಪರಿಶಿಷ್ಟರ ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ತಹಶೀಲ್ದಾರರಾದ ಗೋವಿಂದರಾಜು, ಕುಸುಮ, ತಾ.ಪಂ.ಇಒಗಳಾದ ಲಕ್ಷ್ಮಿ, ಸುನಿಲ್ ಕುಮಾರ್ ಜಯಣ್ಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಇದ್ದರು. ಪ್ರಗತಿ ಪರಿಶೀಲನಾ ಸಭೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗಾಗಿ ವಿವಿಧ ಇಲಾಖೆಯಲ್ಲಿ ಮೀಸಲಿರುವ ಅನುದಾನವನ್ನು ಕಾಲ ಮಿತಿಯೊಳಗೆ ವಿನಿಯೋಗಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮದಡಿ ಸಾಧಿಸಿದ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಪಂಚಾಯತ್ ರಾಜ್, ಅರಣ್ಯ, ಆರೋಗ್ಯ, ವಸತಿ, ಲೋಕೋಪಯೋಗಿ ಹೀಗೆ ನಾನಾ ಇಲಾಖೆಗಳಲ್ಲಿ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ವಿದ್ಯಾರ್ಥಿ ನಿಲಯಗಳಿಗೆ ಮತ್ತು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ರೂ ನಿಗಧಿಯಾಗಿದ್ದು, ಸೂಕ್ತ ಸ್ಥಳ ಗುರ್ತಿಸಬೇಕಿದೆ ಎಂದರು. ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ವಿರಾಜಪೇಟೆ ಬಳಿ ವಾಲ್ಮೀಕಿ ಭವನ ನಿರ್ಮಾಕ್ಕೆ ಉತ್ತಮ ಜಾಗ ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು. ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನಾ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು. ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು ಎಂದು ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್, ತಹಶೀಲ್ದಾರ್ ಕುಸುಮ, ಗೋವಿಂದರಾಜು, ತಾ.ಪಂ.ಇಒಗಳಾದ ಸುನಿಲ್ ಕುಮಾರ್, ಲಕ್ಷ್ಮೀ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಕುಮಾರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ, ಕೈಮಗ್ಗ ಮತ್ತು ಜವುಳಿ ಇಲಾಖೆಯ ಗುರುಸ್ವಾಮಿ, ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ರವಿಕುಮಾರ್ ಇತರರು ಇದ್ದರು.

ಭಾರತ ಮತ್ತು ಅಮೆರಿಕ ವಿದೇಶಾಂಗ ಸಚಿವರ ಭೇಟಿ; ಸಂಬಂಧ ಗಟ್ಟಿಗೊಳಿಸಲು ಚರ್ಚೆ

ಭಾರತ ಮತ್ತು ಅಮೆರಿಕ ವಿದೇಶಾಂಗ ಸಚಿವರ ಭೇಟಿ; ಸಂಬಂಧ ಗಟ್ಟಿಗೊಳಿಸಲು ಚರ್ಚೆ

ನವದೆಹಲಿ(ಜೂನ್ 26): ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಅಮೆರಿಕದ ಪ್ರಧಾನ ಕಾರ್ಯದರ್ಶಿ ಮೈಕ್ ಪೋಂಪಿಯೋ ಅವರು ಇಂದು ಬುಧವಾರ ಭೇಟಿಯಾದರು. ಎರಡೂ ದೇಶಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಇವರಿಬ್ಬರು ಮಾತುಕತೆ ನಡೆಸಿದರು. ಇರಾನ್ ಮತ್ತು ರಷ್ಯಾದೊಂದಿಗಿರುವ ಭಾರತದ ವ್ಯಾವಹಾರಿಕ ಸಂಬಂಧವು ಅಮೆರಿಕವನ್ನು ಇರಿಸುಮುರುಸುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿಯಾಗಿರುವುದು ಗಮನಾರ್ಹ. ಇದೇ ಹಿನ್ನೆಲೆಯಲ್ಲೇ ಈ ಭೇಟಿಯು ಸಾಕಷ್ಟು ಕುತೂಹಲ ಮೂಡಿಸಿದೆ. ಈ ವಾರಾಂತ್ಯದಲ್ಲಿ ಜಪಾನ್​ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ಅವರ ಭೇಟಿಗೆ ಪೂರ್ವಭಾವಿಯಾಗಿ ಇವತ್ತು ವಿದೇಶಾಂಗ ಸಚಿವರ ಮಾತುಕತೆ ನಡೆದಿದೆ.
ಮೈಕ್ ಪಾಂಪಿಯೋ ಅವರು ನಿನ್ನೆ ಮಂಗಳವಾರ ರಾತ್ರಿಯೇ ದೆಹಲಿಯಗೆ ಆಗಮಿಸಿದ್ದರು. ಇವತ್ತು ಬೆಳಗ್ಗೆ ಅವರು ಪ್ರಧಾನಿ ನರೇಂದ್ರ ಅವರನ್ನು ಭೇಟಿಯಾಗಿ ಕೆಲ ವಿಚಾರಗಳಲ್ಲಿ ಅಭಿಪ್ರಾಯ ಹಂಚಿಕೊಂಡರು ಎಂದು ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಇನ್ನು, ಭಾರತ ಮತ್ತು ಅಮೆರಿಕದ ವಿದೇಶಾಂಗ ಸಚಿವರು ತಮ್ಮಿಬ್ಬರ ಭೇಟಿಯ ಬಳಿಕ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ವ್ಯವಹಾರ ವಿಚಾರದಲ್ಲಿ ಸ್ನೇಹಿತರ ಮಧ್ಯೆ ಭಿನ್ನಾಭಿಪ್ರಾಯ ಇರುವುದು ಸಹಜ. ಅದನ್ನು ಕಾಲಾನುಕ್ರಮದಲ್ಲಿ ಬಗೆಹರಿಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ವಿದೇಶೀ ಭಯೋತ್ಪಾದನೆ (ಕ್ರಾಸ್ ಬಾರ್ಡರ್ ಟೆರರಿಸಂ)ಯನ್ನು ಎರಡೂ ದೇಶಗಳು ಬಲವಾಗಿ ಖಂಡಿಸಿವೆ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು.
ಭಯೋತ್ಪಾದನೆ ವಿಚಾರದ ಜೊತೆಗೆ, ರಷ್ಯಾ ದೇಶದ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಭಾರತ ಖರೀದಿಸುತ್ತಿರುವುದು; ಇರಾನ್​ನಿಂದ ತೈಲ ಆಮದು ಮಾಡಿಕೊಳ್ಳುತ್ತಿರುವುದು; ಅಮೆರಿಕದ ಹೆಚ್-1ಬಿ ವೀಸಾ; ಭಾರತ ಮತ್ತು ಅಮೆರಿಕ ನಡುವಿನ ವ್ಯವಹಾರ ಬಿಕ್ಕಟ್ಟು ಇತ್ಯಾದಿ ವಿಚಾರಗಳನ್ನು ಈ ವಿದೇಶಾಂಗ ಸಚಿವರ ಭೇಟಿ ವೇಳೆ ಚರ್ಚೆ ಮಾಡಲಾಗಿದೆ. ಆದರೆ, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಿಲ್ಲ. ಆದರೆ, ಭೇಟಿ ನಂತರ ಮಾತನಾಡಿದ ಎಸ್. ಜೈಶಂಕರ್, ಯಾವುದೇ ನಿರ್ಧಾರ ಕೈಗೊಳ್ಳುವಾಗ ಭಾರತದ ಹಿತಾಸಕ್ತಿಯನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದ್ಧಾರೆ.

ಜೂನ್, 26, 2019. ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ) 


ಮಡಿಕೇರಿ ಜೂ.26(ಕರ್ನಾಟಕ ವಾರ್ತೆ):-ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 9.04 ಮಿ.ಮೀ. ಕಳೆದ ವರ್ಷ ಇದೇ ದಿನ 15.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 357.50 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1198.58 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.75 ಮಿ.ಮೀ. ಕಳೆದ ವರ್ಷ ಇದೇ ದಿನ 18.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 457.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1600.94 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.53 ಮಿ.ಮೀ. ಕಳೆದ ವರ್ಷ ಇದೇ ದಿನ 13.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 427.99 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1135.68 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.83 ಮಿ.ಮೀ. ಕಳೆದ ವರ್ಷ ಇದೇ ದಿನ 16.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 186.11 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 859.11 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 21.40, ನಾಪೋಕ್ಲು 8, ಸಂಪಾಜೆ 5, ಭಾಗಮಂಡಲ 28.60, ವಿರಾಜಪೇಟೆ ಕಸಬಾ 13.20, ಹುದಿಕೇರಿ 3, ಶ್ರೀಮಂಗಲ 5.40, ಪೊನ್ನಂಪೇಟೆ 16.20, ಅಮ್ಮತಿ 1.40, ಬಾಳೆಲೆ 6, ಸೋಮವಾರಪೇಟೆ ಕಸಬಾ 0.60, ಶನಿವಾರಸಂತೆ 7.60, ಶಾಂತಳ್ಳಿ 6.90, ಕೊಡ್ಲಿಪೇಟೆ 1.60, ಕುಶಾಲನಗರ 4, ಸುಂಟಿಕೊಪ್ಪ 2.30 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ನೀರಿನ ಮಟ್ಟ (26-06-19) ವರದಿ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2807.16 ಅಡಿಗಳು, ಕಳೆದ ವರ್ಷ ಇದೇ ದಿನ 2838.50 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.60 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಇಂದಿನ ನೀರಿನ ಒಳಹರಿವು 182 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1245 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 30 ಕ್ಯುಸೆಕ್.

ಚೆಟ್ಟಳ್ಳಿ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ.. 


ಚೆಟ್ಟಳ್ಳಿ; ಇಲ್ಲಿನ ಚೆಟ್ಟಳ್ಳಿ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಸಂಚಾಲಕಾರದ ಮುಳ್ಳಂಡ ರತ್ತು ಚಂಗಪ್ಪ, ದಿನಾಲೂ ಯೋಗ ಮಾಡುವುದರಿಂದ ಆರೋಗ್ಯವಾಗಿರಲು ಸಾಧ್ಯ ಎಂದರು. ಆಡಳಿತ ಉಪಾಧ್ಯಕ್ಷರಾದ ದಿಲೀಪ್ ಅಪ್ಪಚ್ಚು, ಶಾಲಾ ಮುಖ್ಯೋಪಾಧ್ಯಾಯರಾದ ಜಿ.ಸಿ ಸತ್ಯನಾರಾಯಣ, ಶಿಕ್ಷಕರದಾ ತಿಲಕ, ಪ್ರಸನ್ನ, ಸುನಂದಾ, ಫಸೀಲ ,ನೂತನ, ಮನೋಜ್ ಇದ್ದರು.

ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಅನ್ನೀಸ್ ಕೆ. ಜಾಯ್



ವಿರಾಜಪೇಟೆ: ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಅವರು ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿಗೆ ತುತ್ತಾಗಿರುವ ಬಿರುನಾಣಿ, ಪರಕಟಗೇರಿ, ತೆರಾಲು, ಕುರ್ಚಿ, ಮಂಚಳ್ಳಿ ಹಾಗೂ ಶ್ರೀಮಂಗಲ ಪ್ರದೇಶಗಳಿಗೆ ಗ್ರಾಮಸ್ಥರು, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅರ್ಜಿ ಆಹ್ವಾನ 


ಮಡಿಕೇರಿ :ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2019-20ನೇ ಸಾಲಿನಲ್ಲಿ ಸಾಮಾನ್ಯ ಯೋಜನೆಯಡಿ 2 ತಿಂಗಳ ಯಕ್ಷಗಾನ ತರಬೇತಿಗೆ (ತೆಂಕುತಿಟ್ಟು, ಬಡಗುತಿಟ್ಟು, ಬಡಾಬಡಗುತಿಟ್ಟು) ಕಲಾವಿದರುಗಳಿಂದ/ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಕ್ಷಗಾನ ತರಬೇತಿಯನ್ನು ಕನಿಷ್ಠ 10 ಮಂದಿಗೆ ನೀಡಬಯಸುವ ಆಸಕ್ತ ಕಲಾವಿದರು, ಕಲಾಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. 2018-19ನೇ ಸಾಲಿನಲ್ಲಿ ಯಕ್ಷಗಾನ ತರಬೇತಿಗೆ ಅವಕಾಶ ಪಡೆದ ಕಲಾಸಂಸ್ಥೆ, ಕಲಾವಿದರಿಗೆ ಅವಕಾಶವಿರುವುದಿಲ್ಲ. ಉಳಿದ ಕಲಾಸಂಸ್ಥೆ, ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಯಕ್ಷಗಾನ ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು, ಕಲಾ ಸಂಸ್ಥೆಗಳು ತಮ್ಮ ಮನವಿಯನ್ನು ಜುಲೈ, 15 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ಕಚೇರಿ ದೂ. 080-22113146 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು ತಿಳಿಸಿದ್ದಾರೆ.

ಜುಲೈ 3ರಂದು ಮರಳು ಹರಾಜು‌..


 ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರರು, ವಿರಾಜಪೇಟೆ ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಜುಲೈ, 03 ರಂದು ಬೆಳಗ್ಗೆ 11 ಗಂಟೆಗೆ ಶ್ರೀಮಂಗಲ ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ನಡೆಸಲಾಗುವುದು. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ಕಚೇರಿ ದೂರವಾಣಿ ಸಂ: 08272-228523 ಯನ್ನು ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮಾ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಅರ್ಜಿ ಆಹ್ವಾನ


ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ/ ಕೆಪಿಎಸ್‍ಸಿ ಅರ್ಹತಾ ಮತ್ತು ಮುಖ್ಯ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯ ಬಯಸುವ ಅಭ್ಯರ್ಥಿಗಳು ಜುಲೈ, 10 ರೊಳಗೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272-225528/220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಅವರು ತಿಳಿಸಿದ್ದಾರೆ.

ಜನ ಸಂಪರ್ಕ ಸಭೆ


 ಮಡಿಕೇರಿ -ಗೋಣಿಕೊಪ್ಪ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಜೂನ್, 29 ರಂದು ಬೆಳಗ್ಗೆ 10.30 ಗಂಟೆಯಿಂದ 12 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಜೂನ್, 29 ರಂದು ಮಧ್ಯಾಹ್ನ 2.30 ಗಂಟೆಯಿಂದ 4 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ಅವರು ತಿಳಿಸಿದ್ದಾರೆ.

ಜೂ.26 ರಂದು ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ. 


ಮಡಿಕೇರಿ: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುರ್ನವಸತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್(ರಿ.), ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್, 26 ರಂದು ಬೆಳಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಆರ್.ಸಂಪತ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಡಿ.ತಿಮ್ಮಯ್ಯ, ಶಕ್ತಿ ಅಸೋಷಿಯೇಷನ್ ವ್ಯವಸ್ಥಾಪಕರ ನಿರ್ದೇಶಕರಾದ ಡಾ.ವಿ.ಎಂ.ಶಶಿಕುಮಾರ್, ಗ್ರೀನ್ ಡಾಟ್ ಟ್ರಸ್ಟ್‍ನ ಕಾರ್ಯದರ್ಶಿ ಡಾ.ಸಿ.ಕೆ.ಕಾಂತರಾಜ್ ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಲಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಜು.05 ರವರೆಗೆ ಹೆಸರು ನೋಂದಣಿಗೆ ಅವಕಾಶ 


ಮಡಿಕೇರಿ:ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ. 6 ಸಾವಿರಗಳನ್ನು ಪ್ರತಿ 4 ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದ್ದರಿಂದ ರೈತರು ತಮ್ಮ ಆಧಾರ್ ಸಂಖ್ಯೆ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ ಅಥವಾ ಜನ ಸ್ನೇಹಿ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ರೈತರು ಹೆಸರು ನೋಂದಾಯಿಸಲು/ ಅರ್ಜಿ ಸಲ್ಲಿಸಲು ಜುಲೈ, 05 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಅನರ್ಹತೆಗಳು: ನಿವೃತ್ತ/ ಹಾಲಿ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ, ನೌಕರರು (ಗ್ರೂಪ್-ಡಿ ಹೊರತುಪಡಿಸಿ), 10 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು. ಆದಾಯ ತೆರಿಗೆ ಪಾವತಿದಾರರು. ವೃತ್ತಿಪರರು(ವೈದ್ಯರು, ಅಭಿಯಂತರರು, ವಕೀಲರು, ಮತ್ತು ಇತರೆ), ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದವರಿಗೆ ಅವಕಾಶ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಲ್ಕಂದೂರು ಮದ್ರಸ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ


ಸೋಮವಾರಪೇಟೆ : ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ಆಫ್ ಇಂಡಿಯಾ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಇರ್ಶಾದುಲ್ ಇಸ್ಲಾಂ ಮದರಸ ಕಲ್ಕಂದೂರು ಇದರ 1ನೇ ತರಗತಿಯಿಂದ 8ನೇ ತರಗತಿವರೆಗೆ ಊರ ದಾನಿಗಳ ಸಹಾಯದಿಂದ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಖತೀಬ್ ಅಬ್ದುಲ್ ಸಮದ್ ಸಖಾಫಿ , ಮುಅಲ್ಲಿಂ ಫೈಸಲ್ ಮಿಸ್ಬಾಹಿ , ಜಮಾಅತ್ ಅಧ್ಯಕ್ಷ ಇಬ್ರಾಹಿಮ್ ಟಿ ಎಂ ಹಾಜರಿದ್ದರು 

ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ: ಡಾ.ಕೆ.ಮೋಹನ್ 



 ಮಡಿಕೇರಿ:ಜಿಲ್ಲೆಯಲ್ಲಿ ಡೆಂಗೀ ಮತ್ತು ಇನ್ನಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ, ರೋಗ ಪ್ರಕರಣಗಳು ಉಲ್ಭಣಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ದೈನಂದಿನ ಚಟುವಟಿಕೆ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದರು. ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವ್ಯೆದ್ಯಾಧಿಕಾರಿಗಳು ಆರೋಗ್ಯ ಸಹಾಯಕರುಗಳು ಹಾಗೂ ಪ್ರಯೋಗಶಾಲಾ ತಂತ್ರಜ್ಞರ ಜೊತೆ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆ ಗಳಿಗೆ ತಿಳಿಸಿದರು. ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಸಾಂಕ್ರಾಮಿಕ ರೋಗಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಔಷಧಗಳನ್ನು ದಾಸ್ತಾನಿರಿಸಿಕೊಳ್ಳಲಾಗಿದೆ. ತುರ್ತು ಸಂಧರ್ಭಗಳಲ್ಲಿ ರೋಗಿಗಳ ಹೆಚ್ಚಿನ ಉನ್ನತ ಚಿಕಿತ್ಸೆಗೆ ಅನುಕೂಲವಾಗುವಂತೆ ರೆಪರಲ್ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿಗಳಿಗೆ ಸೂಚಿಸಿದರು. ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರಗಳ, ಸಮುದಾಯ ಆರೋಗ್ಯ ಕೇಂದ್ರಗಳು ಗ್ರಾಮ ಪಂಚಾಯತಿಗಳ ಮೂಲಕ ಸಂಗ್ರಹಿಸಿ ನೀಡುವ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು ಕಡ್ಡಾಯವಾಗಿ ಜೈವಿಕ ವಿಶ್ಲೇಷಣೆಗೆ ಒಳಪಡಿಸಿ, ಫಲಿತಾಂಶದ ವರದಿ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಪ್ರತೀ ಮಾಹೆ ಮಾಹಿತಿ ನೀಡಬೇಕಿದೆ ಎಂದರು. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯೆದ್ಯಾಧಿಕಾರಿಗಳು ಮತ್ತು ಅರೋಗ್ಯ ಸಹಾಯಕರುಗಳು ಗ್ರಾಮ ಪಂಚಾಯತಿಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ಕುಡಿಯುವ ನೀರಿನ ಗುಣಮಟ್ಟ, ಸುರಕ್ಷಿತ ಕುಡಿಯುವ ನೀರಿನ ಬಳಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರುಗಳು ಮನೆ ಮನೆ ಭೇಟಿ ನೀಡಿ ಜನ ಸಾಮಾನ್ಯರಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವಂತೆ ಡಿಎಚ್‍ಒ ಅವರು ಸಲಹೆ ಮಾಡಿದರು. ಕೊಡಗು ಜಿಲ್ಲೆಯಲ್ಲಿ ಡೆಂಗೀ ಮತ್ತು ಚಿಕನ್‍ಗುನ್ಯಾ ರೋಗಗಳ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳು: 2019 ರ ಮೇ, 16 ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಡೆಂಗಿ ದಿನಾಚರಣೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಚರಿಸಲಾಗಿದೆ. ಜೂನ್-2019 ನೇ ಮಾಹೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯನ್ವಯ ಜಿಲ್ಲಾದ್ಯಂತ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಚರಿಸಲಾಗುತ್ತಿದೆ. ಜುಲೈ-2019 ಮತ್ತು ಆಗಸ್ಟ್-2019 ನೇ ಮಾಹೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯನ್ವಯ ಜಿಲ್ಲಾದ್ಯಂತ ಡೆಂಗಿ ವಿರೋಧಿ ಮಾಸಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಚರಿಸಲು ಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ಏಡೀಸ್ ಲಾರ್ವಾ ಸಮೀಕ್ಷೆ ಕೈಗೊಳ್ಳುತ್ತಿದ್ದಾರೆ. ಏಡೀಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಲಾರ್ವಾ ಉತ್ಪತ್ತಿ ತಾಣಗಳ ನಿರ್ಮೂಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರಮುಖ ಸ್ಥಳಗಳ ಪರಿಸರದಲ್ಲಿ ಬಿಸಾಡಿದ ಮಳೆನೀರು ಸಂಗ್ರಹವಾಗುವಂತಹ ಘನ ತ್ಯಾಜ್ಯ ವಸ್ತುಗಳಾದ ಪ್ಲಾಸ್ಟಿಕ್ ವಸ್ತುಗಳು, ಎಳನೀರಿನ ಚಿಪ್ಪುಗಳು, ಗಾಜಿನ ವಸ್ತುಗಳು, ಹಳೆಯ ಟೈರುಗಳು ಮತ್ತಿತರವನ್ನು ವಾರಕ್ಕೊಮ್ಮೆ ವಿಲೇವಾರಿ ಮಾಡಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಆರೋಗ್ಯ ಶಿಕ್ಷಣ ನೀಡಲು ಮತ್ತು ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ಅಗತ್ಯ ಕ್ರಮವಹಿಸಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚಿಸಿ ಕ್ರಮವಹಿಸಲಾಗಿದೆ. ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಈಗಾಗಲೇ ಡೆಂಗೀಜ್ವರ ಪ್ರಕರಣಗಳು ವರದಿಯಾಗಿರುವುದರಿಂದ ಇವುಗಳ ಅಗತ್ಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಕ್ರಮವಹಿಸಲು ಸೂಚಿಸಲಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಡೆಂಗೀಜ್ವರದ ಅಗತ್ಯ ಬೆಂಬಲಾತ್ಮಕ ಚಿಕಿತ್ಸೆಯ ಔಷಧಗಳನ್ನು ದಾಸ್ತಾನಿರಿಸಿಕೊಳ್ಳಲಾಗಿದೆ. ತುರ್ತು ಸಂಧರ್ಭಗಳಲ್ಲಿ ರೋಗಿಗಳ ಹೆಚ್ಚಿನ ಉನ್ನತ ಚಿಕಿತ್ಸೆಗೆ ಅನುಕೂಲವಾಗುವಂತೆ ರೆಪರಲ್ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಡೆಂಗಿಜ್ವರ ಮತ್ತು ಚಿಕನ್‍ಗುನ್ಯ ರೋಗ ಪ್ರಕರಣಗಳನ್ನು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿಯೇ ಇಎಲ್‍ಐಎಸ್‍ಎ (ಇಐISಂ) ಪರೀಕ್ಷೆಯನ್ನು ಮಾಡುವ ವ್ಯವಸ್ಥೆಯನ್ನು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಸೂಚನೆಯಂತೆ ಪ್ರಯೋಗಾಲಯ ಪರೀಕ್ಷೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 10 ಎಚ್1 ಎನ್1, 1 ಲ್ಯಾಪ್ಟಸ್, ಡೆಂಗ್ಯು 6, ಚಿಕನ್‍ಗುನ್ಯ 3, ಟೈಪಾಯಿಡ್ 165, ನಾಯಿ ಕಡಿತ 2,195 ಪ್ರಕರಣಗಳು ವರದಿಯಾಗಿವೆ ಎಂದು ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್ ಅವರು ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 2 ಎಚ್1 ಎನ್1, 1 ಲ್ಯಾಪ್ಟಸ್ ಪಿರಾಸಿಸ್, ಡೆಂಗ್ಯು 2, ಚಿಕನ್‍ಗುನ್ಯ 1, ಟೈಪಾಯಿಡ್ 66, ನಾಯಿ ಕಡಿತ 451. ಸೋಮವಾರಪೇಟೆ ತಾಲ್ಲೂಕಿನಲ್ಲಿ 6 ಎಚ್1 ಎನ್1, ಡೆಂಗ್ಯು 2, ಚಿಕನ್‍ಗುನ್ಯ 2, ಟೈಪಾಯಿಡ್ 22, ನಾಯಿ ಕಡಿತ 1230. ವಿರಾಜಪೇಟೆ ತಾಲ್ಲೂಕಿನಲ್ಲಿ 2 ಎಚ್1ಎನ್1, ಡೆಂಗ್ಯು 2, ಟೈಪಾಯಿಡ್ 77, ನಾಯಿ ಕಡಿತ 514. ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಮುದಾಯ ಸಹಭಾಗಿತ್ವದಿಂದ ಪ್ರಕೃತಿ ವಿಕೋಪ ಎದುರಿಸಲು ಸಾಧ್ಯ: ಟಿ.ಜವರೇಗೌಡ 



ಮಡಿಕೇರಿ :ಜಿಲ್ಲಾಡಳಿತದ ಜೊತೆ ಸಮುದಾಯ ಸಹಭಾಗಿತ್ವ ಕೈಜೋಡಿಸಿದ್ದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಸಂದfರ್ಭದಲ್ಲಿ ಎದುರಿಸಲು ಸಾಧ್ಯ ಎಂದು ಪುನರ್ ವಸತಿ ವಿಭಾಗದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ಹೇಳಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಬಗ್ಗೆ ಮಂಗಳವಾರ ನಡೆದ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಹಲವು ಸಮಸ್ಯೆಗಳು ಉಂಟಾಗುತ್ತವೆ. ಇದರಿಂದ ಜೀವಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಉಂಟಾಗಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಆದ್ದರಿಂದ ಪ್ರಕೃತಿ ವಿಕೋಪ ಎದುರಿಸುವಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳು ಕೈಜೋಡಿಸುವಂತಾಗಬೇಕು ಎಂದು ಅವರು ತಿಳಿಸಿದರು. ಪ್ರಸಕ್ತ ಬಾರಿಯ ವಿಕೋಪ ಮುನ್ನೆಚರಿಕೆಯ ನಿರ್ವಹಣೆಗೆ ಜಿಲ್ಲಾಡಳಿತ ಈಗಾಗಲೇ ಸಿದ್ಧತೆಯನ್ನು ಮಾಡಿಕೊಂಡಿದೆ. ಜಿಲ್ಲಾಡಳಿತದೊಂದಿಗೆ ಹಲವಾರು ಸರ್ಕಾರೇತರ ಸಂಘ ಸಂಸ್ಥೆಗಳು, ಎನ್‍ಡಿಆರ್‍ಎಫ್ ತಂಡಗಳು, ವಿಕೋಪ ನಿರ್ವಹಣಾ ತಂಡಗಳು ರಕ್ಷಣೆಗೆ ಜಿಲ್ಲೆಗೆ ಆಗಮಿಸಿದ್ದು, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಪ್ರಕೃತಿ ನಿರ್ವಹಣೆಗೆ ಕೈ ಜೋಡಿಸುವಲ್ಲಿ ಪ್ರಕೃತಿ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಲು

ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. . ಕಾಲೇಜಿನ ಪ್ರಾಂಶುಪಾಲರಾದ ಡಾ.ತಿಮ್ಮಯ್ಯ ಅವರು ಮಾತನಾಡಿ ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಸಮಸ್ಯೆಗಳು ಉಂಟಾದವು. ಆದ್ದರಿಂದ ಈ ಬಾರಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಎನ್‍ಎಸ್‍ಎಸ್.ವಿದ್ಯಾರ್ಥಿಗಳು ಅಗತ್ಯ ಸಹಕಾರ ನೀಡುವಂತೆ ಸಲಹೆ ಮಾಡಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಾಲೋಚಕರಾದ ಪ್ರಭಾತ್ ಕಲ್ಕೂರ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ವಿಪತ್ತು ಸಂಭವಿಸಿದಲ್ಲಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುವುದು, ತುರ್ತು ಪರಿಹಾರ ಸ್ಪಂದನೆ ಹಾಗೂ ವಿಪತ್ತು ಹಾನಿ ಕಡಿಮೆ ಮಾಡುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನಿಡಿದರು. ರಾಷ್ಟ್ರೀಯ ಸೇವಾ ಯೋಜನಾ ವಿಭಾಗದ ಉಪನ್ಯಾಸಕರಾದ ಗೀತಾಂಜಲಿ ಇತರರು ಇದ್ದರು.

ಕೊಡಗು ಜಿಲ್ಲೆಯ ಮಳೆ ವಿವರ


ಮಡಿಕೇರಿ -ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 4.05 ಮಿ.ಮೀ. ಕಳೆದ ವರ್ಷ ಇದೇ ದಿನ 11.29 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 348.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1182.63 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.80 ಮಿ.ಮೀ. ಕಳೆದ ವರ್ಷ ಇದೇ ದಿನ 18.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 441.77 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1582.54 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.52 ಮಿ.ಮೀ. ಕಳೆದ ವರ್ಷ ಇದೇ ದಿನ 7.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 420.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1122.58 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.83 ಮಿ.ಮೀ. ಕಳೆದ ವರ್ಷ ಇದೇ ದಿನ 8.27 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 183.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 842.78 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 0.60, ನಾಪೋಕ್ಲು 2.20, ಸಂಪಾಜೆ 5.60, ಭಾಗಮಂಡಲ 6.80, ವಿರಾಜಪೇಟೆ ಕಸಬಾ 4, ಹುದಿಕೇರಿ 13, ಶ್ರೀಮಂಗಲ 10, ಪೊನ್ನಂಪೇಟೆ 4.60, ಅಮ್ಮತಿ 3.50, ಬಾಳೆಲೆ 4, ಸೋಮವಾರಪೇಟೆ ಕಸಬಾ 1.80, ಶನಿವಾರಸಂತೆ 3.20, ಶಾಂತಳ್ಳಿ 6 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ನೀರಿನ ಮಟ್ಟ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2807.01 ಅಡಿಗಳು, ಕಳೆದ ವರ್ಷ ಇದೇ ದಿನ 2837.50 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ., ಕಳೆದ ವರ್ಷ ಇದೇ ದಿನ 6.20 ಮಿ.ಮೀ. ಇಂದಿನ ನೀರಿನ ಒಳಹರಿವು 221 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1196 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 30 ಕ್ಯುಸೆಕ್.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ "ಹೆಲ್ತಿ ಕ್ಯಾಂಪಸ್" ಜಲ ಸಂರಕ್ಷಣೆ ನಮ್ಮ ಹೊಣೆ ಕಾರ್ಯಕ್ರಮ 


ಮಡಿಕೇರಿ :-ಕ್ಯಾಂಪಸ್ ಫ್ರಂಟ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ 'ಹೆಲ್ತಿ ಕ್ಯಾಂಪಸ್' ಅಭಿಯಾನದ ಅಂಗವಾಗಿ "ಜಲ ಸಂರಕ್ಷಣೆ ನಮ್ಮ ಹೊಣೆ' ಕಾರ್ಯಕ್ರಮವು ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದಿಂದ ರಾಜ್ಯಾದ್ಯಂತ ನಡೆಯುತ್ತಿರು #ಹೆಲ್ತಿ_ಕ್ಯಾಂಪಸ್" ಅಭಿಯಾನದ ಭಾಗವಾಗಿ ಈ ಕಾಲೇಜಿನ ವಿಧ್ಯಾರ್ಥಿನಿಯರಿಗೆ ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆಯ ಬಗ್ಗೆಯ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಕಾಲೇಜಿನಲ್ಲಿ ಸಸಿ ನೆಡುವ ಮೂಲಕ ಕಾಲೇಜಿನಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಮೊಹಮ್ಮದ್ ಸಾದಿಕ್, ಕೊಡಗು ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ,ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಇದ್ದರು.

ದಾರುನ್ನಜಾತ್ ಎಜುಕೇಶನಲ್ ಅಕ್ಯಾಡೆಮಿ ನೆಲ್ಯಾಹುದಿಕೇರಿ ನೂತನ ಮಹಿಳಾ ಶರೀಅತ್ ಕಾಲೇಜು ಪ್ರಾರಂಭ


ನೆಲ್ಯಾಹುದಿಕೇರಿ,:  ದಾರುನ್ನಜಾತ್ ಎಜುಕೇಶನಲ್ ಅಕ್ಯಾಡೆಮಿ ನೆಲ್ಯಾಹುದಿಕೇರಿ ಇದರ ನೂತನ ಕಾರ್ಯಕ್ರಮವಾದ "ಮಹಿಳಾ ಶರೀಅತ್ ಕಾಲೇಜಿನ" ಪ್ರಥಮ ವರ್ಷದ ಉದ್ಘಾಟನೆಯು ಇಂದು ಸೈಯದ್ VPS ಮುತ್ತುಕೋಯ ತಂಙ್ಞಳ್ ಅಲ್ ಬುಖಾರಿ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತ್ತು.ಗ್ರಾಮದ ಸುತ್ತಿಮುತ್ತನ 10ನೇ ತರಗತಿಯನ್ನು ಪೂರೈಸಿದ ಮುಸ್ಲಿಂ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡಿಸಿ ಧಾರ್ಮಿಕ ಮತ್ತು ಭೌತಿಕ ವಿದ್ಯಾಭ್ಯಾಸವನ್ನು ಪಡೆಯುವುದರೊಂದಿಗೆ "ಹಾದಿಯ" ಎಂಬ ಬಿರುದನ್ನು ಕೂಡ ಗಳಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಲ್ ಸಅದಿಯವರು ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು.ಈ ಒಂದು ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಮುಸ್ತಫ ಎಂ.ಎಂ, ಕೋಶಾಧಿಕಾರಿ ಅಬ್ದುಲ್ಲಾ ಪಿ.ಎ, ಸಹಕಾರ್ಯದರ್ಶಿ ರಸಾದ್, ಮಜೀದ್ ಸಿ.ಎಂ, ಅಲವಿ ಹಾಜಿ, ಹಂಸ ಸಿ.ಎಂ, ಸಿದ್ದಾಪುರ ವಲಯ SSF ಉಪಾಧ್ಯಕ್ಷರಾದ ಸಯ್ಯದ್ ಶಿಹಾಬುದ್ದೀನ್ ತಂಙ್ಞಳ್ ಅಲ್ ಬುಖಾರಿ VPS ಭಾಗವಹಿಸಿದರು.ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಧ್ಯಾಪಕರಾದ ಜುಬೈರ್ ಸಅದಿಯವರು ನಿರೂಪಿಸಿದರು.ವರದಿ:ರಿಯಜ್ ಶಾಖಾ ಕಾರ್ಯದರ್ಶಿ

ಸುನ್ನಿ ಜಂಞಯ್ಯತುಲ್ ಮುಅಲ್ಲಿಮೀನ್ ಎಮ್ಮೆಮಾಡು ರೇಂಜ್ ಅಸ್ತಿತ್ವಕ್ಕೆ


ನಾಪೋಕ್ಲು : ದಿನಾಂಕ 25/6/19 ರಂದು ಎಮ್ಮಮಾಡು ನುಸ್ರತುಲ್ ಇಸ್ಲಾಂ ಮದ್ರಾಸಾ ಸಭಾಂಗಣದಲ್ಲಿ ನಡೆದ ಜಂಯಿಯ್ಯತುಲ್ ಮಅಲ್ಲಿಮೀನ್ ಸಭೆಯಲ್ಲಿ ನೂತನವಾಗಿ ಎಮ್ಮೆಮಾಡು ರೇಂಜ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಸಖಾಫಿ ಎಮ್ಮೆಮಾಡು ಕಾರ್ಯದರ್ಶಿಯಾಗಿ ಹಾರಿಸ್ ಸಖಾಫಿ ಅಯ್ಯಂಗೇರಿ ಫೈನಾಂಷ್ ಕಾರ್ಯದರ್ಶಿ ಯಾಗಿ ಸಯ್ಯದ್ ಅಝೀಝ್ ತಂಗಳ್ ರವರನ್ನು ಹಾಗು ಹತ್ತು ಸದಸ್ಯರೊಳಗೊಂಡ ಕಾರ್ಯ ಕಾರಿ ಸಮಿತಿಯನ್ನು ರಚಿಸಲಾಯಿತು.
ಅಬ್ದುಲ್ ರಹ್ಮಾನ್ ಸಖಾಫಿ ( ಅಧ್ಯಕ್ಷರು )

ಬಂಟ್ವಾಳ - ವಿಟ್ಲದಲ್ಲಿ ದುಷ್ಕರ್ಮಿಗಳಿಂದ 7 ಬಸ್ಸಿಗೆ ಕಲ್ಲೆಸೆತ - ಚಾಲಕ ಸೇರಿ ವಿದ್ಯಾರ್ಥಿಗಳಿಗೆ ಗಾಯ



ನ್ಯೂಸ್ ಡೆಸ್ಕ್/ ಕನ್ನಡ ರಿಪೋರ್ಟರ್ 
ಬಂಟ್ವಾಳ : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ ಚಾಲಕ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ವಿಟ್ಲ ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಜೂ. 25 ರ ಮಂಗಳವಾರ ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಮಾಣಿ ಮೂಲಕ ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಪ್ವೇ ಸೇರಿದಂತೆ ಏಳು ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದ ವರದಿಯಾಗಿದೆ . ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಧ್ವಂಸಗೊಂಡಿದೆ. ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿ ಅನೇಕ ಮಂದಿ ಪ್ರಯಾಣಿಸುತ್ತಿದ್ದು, ಕಿಟಕಿ ಗಾಜು ಹಾಗೂ ಕಲ್ಲಿನೇಟಿಗೆ ಮೂವರು ವಿದ್ಯಾರ್ಥಿಗಳಿಗೆ ತಲೆಭಾಗಕ್ಕೆ ಏಟಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ

ಸೂರಿಕುಮೇರ್, ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯ ಕುದ್ರೆಬೆಟ್ಟುನಲ್ಲಿ ಕಲ್ಲು ತೂರಾಟ ನಡೆದಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯವೆಸಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಪ್ರಖಂಡದ ಭಜರಂಗ ದಳದ ಮುಖಂಡ ಅಕ್ಷಯ್ ರಜಪೂತ್ ಸೇರಿದಂತೆ ಹಲವು ಮಂದಿ ಮೇಲೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮುಖಂಡರ ಮೇಲೆ ಪ್ರಕರಣ ದಾಖಲಾದ ಹಿನ್ನೆಯಲ್ಲಿ ವಿಟ್ಲ ಪ್ರಖಂಡದ ಪ್ರದೇಶಗಳಲ್ಲಿ ಬಂದ್ ಮಾಡಲಾಗುವುದು ಎಂದು ಹಿಂದೂಪರ ಸಂಘಟನಡಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಜೇಜ್ ಹರಿಯಬಿಟ್ಟಿದ್ದರು.


 ಇದರ ಮುಂದುವರಿದ ಭಾಗವಾಗಿ ಈ ಘಟನೆ ಸಂಭವಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಲಕ್ಷ ಲಕ್ಷ ದಂಡ; ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ


ಬೆಂಗಳೂರು (ಜೂ.25): ದೇಶದಲ್ಲಿ ಅಪಘಾತ ಪ್ರಮಾಣ ದಿನೇ ದಿನೇ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಸಂಚಾರಿ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಅಪಘಾತಕ್ಕೆ ಪ್ರಮುಖ ಕಾರಣ. ಹೀಗಾಗಿ ಸಂಚಾರ ನಿಯಮವನ್ನು ಗಾಳಿಗೆ ತೂರುವವರಿಗೆ ಹೆಚ್ಚಿನ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಮೋಟಾರು ವಾಹನ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಮರುಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಕಳೆದ ಬಾರಿ ಈ ವಿಧೇಯಕಕ್ಕೆ ಲೋಕಸಭೆಯಲ್ಲಿ ಅನುಮತಿ ಸಿಕ್ಕಿತ್ತಾದರೂ ರಾಜ್ಯ ಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಈ ವಿಧೇಯಕಕ್ಕೆ ಇಂದು ಅನುಮತಿ ಸಿಗುವ ಸಾಧ್ಯತೆ ಇದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ವೀಧೆಯಕಕ್ಕೆ ಅನುಮೋದನೆ ದೊರೆತರೆ ಕನಿಷ್ಠ ದಂಡದ ಮೊತ್ತ 1 ಸಾವಿರ ರೂ. ಆಗಿರಲಿದೆ. ಅಲ್ಲದೆ 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶ ಇರಲಿದೆ. ಒಂದೊಮ್ಮೆ ಈ ನಿಯಮ ಜಾರಿಗೆ ಬಂದರೆ ವಾಹನ ಸವಾರರಿಗೆ ಭಾರೀ ಹೊರೆ ಆಗಲಿದೆ.
ಈ ವಿಧೇಯಕ ಮಂಡನೆಗೆ ಈ ಮೊದಲು ಎಲ್ಲ ಕಡೆಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಈಗ ಮತ್ತೆ ಈ ವಿಧೆಯಕ ಮರು ಮಂಡನೆಗೆ ಸರ್ಕಾರ ಮುಂದಾಗಿರುವುದರಿಂದ ಮತ್ತೆ ಪ್ರತಿಭಟನೆಗಳು ನಡೆಯುವ ಲಕ್ಷಣ ಗೋಚರವಾಗಿದೆ.
ಎಷ್ಟಷ್ಟು ದಂಡ?: ಲೈಸೆನ್ಸ್​ ಇಲ್ಲದೆ ವಾಹನ ಚಾಲನೆ ಮಾಡಿದರೆ 5,000 ರೂ. ದಂಡ. ವೇಗದ ಮಿತಿ ದಾಟಿದರೆ  1000 ರೂ. ದಂಡ. ಅಡ್ಡಾದಿಡ್ಡಿ ಹಾಗೂ ಮೊಬೈಲ್​ ಬಳಕೆ ಮಾಡುತ್ತಾ ಬೈಕ್​ ಸವಾರಿ ಮಾಡಿದರೆ 1000 ರೂ. ದಂಡ, ಕುಡಿದು ವಾಹನ ಚಲಾಯಿಸಿದರೆ 10,000 ರೂ ದಂಡ ಬೀಳಲಿದೆ. ಹಿಟ್​ ಆ್ಯಂಡ್​ ರನ್​ ಪ್ರಕರಣದಲ್ಲಿ ಸಂತ್ರಸ್ತರಿಗೆ 25 ಸಾವಿರ ರೂ. ಬದಲು 2 ಲಕ್ಷ ರೂ.ವರೆಗೆ ಪರಿಹಾರ ನೀಡಬೇಕಾಗುತ್ತದೆ

ಮರ್ಕಝ್ ಕುರಿತು ಅಧ್ಯಯನ ಪ್ರಬಂಧಕ್ಕೆ- ಮದ್ರಾಸ್ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಆಹ್ಮದುಲ್ಲಾ ಸಖಾಫಿ ಕೊಯಂಬತ್ತೂರು

                   
ಚೆನ್ನೈ : ಭಾರತದಲ್ಲಿ ಅರೇಬಿಕ್ ಭಾಷೆಯ ಅಭಿವೃದ್ಧಿಗಾಗಿ ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರ ಸಾರಥ್ಯದಲ್ಲಿ ಕಾರ್ಯಚರಿಸುತ್ತಿರುವ ವಿಶ್ವವಿಖ್ಯಾತ ಮರ್ಕಝ್ ಸಂಸ್ಥೆ ನೀಡಿದ ಕೊಡುಗೆಗಳು. ಎಂಬ ಅಧ್ಯಯನ ಪ್ರಬಂಧಕ್ಕೆ ಮದ್ರಾಸ್ ವಿಶ್ವ ವಿದ್ಯಾಲಯದಿಂದ ಆಹ್ಮದುಲ್ಲಾ ಸಖಾಫಿ ಕೊಯಂಬತ್ತೂರು. ಅವರಿಗೆ ಡಾಕ್ಟರೇಟ್ ಲಭಿಸಿದೆ. ತಮಿಳುನಾಡಿನ ಮದ್ರಾಸ್ ವಿಶ್ವವಿದ್ಯಾಲಯದ ಅರಬಿಕ್ ವಿಭಾಗದ ಡಾ: ಶಾಕಿರ್ ಹುಸೇನ್. ಅವರ

ಮಾರ್ಗದರ್ಶನದಲ್ಲಿ ಅಧ್ಯಯನವನ್ನು ಪೂರ್ತಿಗೊಳಿಸಿದ್ದಾರೆ 2004ರಲ್ಲಿ ಕೇರಳದ ಕ್ಯಾಲಿಕೆಟ್ ನಲ್ಲಿರುವ ಜಾಮಿಯ ಮರ್ಕಝ್ ಸ್ಸಖಾಫತಿ ಸ್ಸುನ್ನೀಯ್ಯಾ ಯೂನಿವರ್ಸಿಟಿಯಿಂದ. ಧಾರ್ಮಿಕ ಶಿಕ್ಷಣದಲ್ಲಿ ಸಖಾಫಿ ಪದವಿಯನ್ನು ಅವರು ಪಡೆದಿದ್ದು. ತಮಿಳುನಾಡು ಕೊಯಂಬತ್ತೂರು ನಿವಾಸಿಗಳಾದ ಸೈಯದ್ ಅಬ್ದುಲ್ ಶುಕುರ್ ಹಾಗೂ ಮಹಮೂದಾ ಬೀಬಿ ದಂಪತಿಯ ಪುತ್ರರಾಗಿದ್ದಾರೆ. ಆಹ್ಮದುಲ್ಲಾ ಸಖಾಫಿ. ಮೂಲ : ಸಿರಾಜ್ ಡೈಲಿ. ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ.

ನೀರಿನ ಟ್ಯಾಂಕರ್ - ಬೈಕ್ ಡಿಕ್ಕಿ: ಇಬ್ಬರ ದುರ್ಮರಣ



ಚಿಕ್ಕಮಗಳೂರು, ( ಜೂನ್.24) :.ಚಿಕ್ಕಮಗಳೂರಿನ ಹಳೆ ಲಕ್ಯಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನೀರಿನ ಟ್ಯಾಂಕರ್ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಅಣ್ಣ, ತಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.


ಎಸ್.ಬಿದರೆಯಿಂದ ಚಿಕ್ಕಮಗಳೂರಿಗೆ ಬೈಕ್ ನಲ್ಲಿ ಅಣ್ಣ, ತಂಗಿ ಹಾಗೂ ಮಗು ತೆರಳುತ್ತಿದ್ದ ಸಂದರ್ಭದಲ್ಲಿ ನೀರಿನ ಟ್ಯಾಂಕರ್ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಲತಾಮಣಿ (25ವರ್ಷ), ಅಶೋಕ್ (30ವರ್ಷ) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯಿಸಿ ಮುಸ್ಲಿಂ ಯುವಕನನ್ನು ಥಳಿಸಿ ಕೊಂದ ಗುಂಪು


ಜಮ್​ಶೆಡ್​ಪುರ (ಜೂ. 24): ಕಳ್ಳತನ ಮಾಡಿದ್ದಾನೆಂಬ ಅನುಮಾನದಿಂದ ಮುಸ್ಲಿಂ ಯುವಕನೊಬ್ಬನ ಮೇಲೆ ಜನರ ಗುಂಪು ದಾಳಿ ನಡೆಸಿ ಮನಬಂದಂತೆ ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.
ಜಾರ್ಖಂಡ್ ರಾಜ್ಯದ ಖಾರ್ಸಾವಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಜೂನ್ 18ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯಕ್ಕೆ ಈ ವಿಡಿಯೋ ಟ್ವಿಟ್ಟರ್​ನಲ್ಲಿ ವೈರಲ್ ಆಗಿದೆ. ಜನರಿಂದ ಥಳಿಸಿಕೊಂಡ ಯುವಕನನ್ನು 24 ವರ್ಷದ ತಬ್ರೇಜ್ ಹನ್ಸಾರಿ ಎಂದು ಗುರುತಿಸಲಾಗಿದೆ. ಹೊಡೆಯುತ್ತಿರುವ ಜನರು ಆತನಿಗೆ ಜೈ ಶ್ರೀರಾಮ್​ ಎಂದು ಹೇಳುವಂತೆ ಒತ್ತಾಯಿಸುವುದು ವಿಡಿಯೋದಲ್ಲಿ ದಾಖಲಾಗಿದೆ.
ಸುಮಾರು 18 ಗಂಟೆಗಳ ಕಾಲ ಮರಕ್ಕೆ ಕಟ್ಟಿ ಹಾಕಿ ಆತನನ್ನು ಥಳಿಸಿ, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಜೂನ್ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಊರಿನವರ ಮೋಟಾರ್​ ಬೈಕ್​ ಕದ್ದಿದ್ದಾನೆ ಎಂದು ಆರೋಪಿಸಿ ಈ ಯುವಕನಿಗೆ ಮಾರಣಾಂತಿಕವಾಗಿ ಥಳಿಸಲಾಗಿದೆ. ಹೊಡೆತದಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಯುವಕನಿಗೆ ಜೈ ಶ್ರೀರಾಮ್, ಜೈ ಹನುಮಾನ್​​ ಎಂದು ಹೇಳುವಂತೆ ಜನರು ಒತ್ತಾಯಿಸಿದ್ದಾರೆ.

ಹೊಡೆದ ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆತನ ಸಂಬಂಧಿಕರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಆತನನ್ನು ಆಸ್ಪತ್ರೆಗೆ ಸೇರಿಸಿರುವ ಬಗ್ಗೆ ಪೊಲೀಸರು ನಮಗೆ ಯಾವ ಮಾಹಿತಿಯನ್ನೂ ನೀಡಿರಲಿಲ್ಲ. ಜೈಲಿನಲ್ಲಿದ್ದ ಮಗನನ್ನು ನೋಡಲು ಅವಕಾಶವನ್ನೂ ನೀಡಲಿಲ್ಲ. ಆತನಿಗೆ ಹಿಂಸೆ ಕೊಟ್ಟ ಜನರು ಮತ್ತು ಪೊಲೀಸರೆಲ್ಲ ಜೈಲಿಗೆ ಹೋಗಬೇಕು ಎಂದು ಹನ್ಸಾರಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಕಳೆದ ಡಿಸೆಂಬರ್​ನಲ್ಲಿ ಬುಲಂದ್​ಶೆಹರ್​ನಲ್ಲಿ ಗೋವುಗಳ ಹತ್ಯೆ ಆರೋಪದಲ್ಲಿ ಇದೇ ರೀತಿ ಗಲಾಟೆಯೆದ್ದು ಪೊಲೀಸ್​ ಅಧಿಕಾರಿ ಸುಭೋದ್​ ಸಿಂಗ್ ಮತ್ತು ಯುವಕ ಸುಮಿತ್ ಕುಮಾರ್​ಗೆ ಥಳಿಸಿ ಹತ್ಯೆ ಮಾಡಲಾಗಿತ್ತು. ಇಂತಹ ಘಟನೆಗಳು ಪುನರಾವರ್ತಿತವಾಗುತ್ತಿದ್ದು, ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳದಿರುವುದಕ್ಕೆ ಟ್ವಿಟ್ಟರ್​ನಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯಿತು ಆತ್ಮಹತ್ಯಾ ಯತ್ನ...! ಕಾರಣ ನಿಗೂಢ



ಬೆಂಗಳೂರು : ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ 3ನೇ ಮಹಡಿಯಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
 ಚಿಕ್ಕಬಳ್ಳಾಪುರದಲ್ಲಿ ಲೈಬ್ರರಿಯನ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ರೇವಣ್ಣ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ. ಇನ್ನು ಈ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶೌಚಾಲಯ ಕೊಠಡಿ ಸಂಖ್ಯೆ 332ರಲ್ಲಿ ಘಟನೆ ನಡೆದಿದೆ.

ಭದ್ರತೆಯ ನಡುವೆಯೂ ವಿಧಾನಸೌಧದಲ್ಲಿ ಇಂತಹ ಘಟನೆ ನಡೆದಿದ್ದು, ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಕುಸಿದು ಬಿದ್ದ ಜಾಗದಲ್ಲಿ ಮಾತ್ರೆಗಳು ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ಕೆಲವೊಂದು ದಾಖಲೆಗಳು ಪತ್ತೆಯಾಗಿವೆ. ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿವೇಕ ಟ್ರಸ್ಟ್ ವತಿಯಿಂದ ಹಸಿರೇ ಉಸಿರು ಕಾರ್ಯಕ್ರಮ 




ವರದಿ  : ಮಾಸಿಂ ಶರೀಫ್ ಹುಣಸೂರು ( ಜೂನ್ 24 ) : ವಿವೇಕ ಟ್ರಸ್ಟ್ ವತಿಯಿಂದ ಹಸಿರೇ_ಉಸಿರು ಎಂಬ ಕಾರ್ಯಕ್ರಮದಡಿಯಲ್ಲಿ ಕಲ್ಕುಣಿಕೆಯ ರಂಗನಾಥ ಬಡಾವಣಿಯ ಹಿರಿಯ ಪ್ರೌಢಶಾಲೆಯಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಗಿಡಗಳನ್ನ ನೆಡುವುದರ ಮೂಲಕ ಹಾಗೂ ಶಾಲಾ ಮಕ್ಕಳಿಗೆ ಪ್ಲ್ಯಾಸ್ಟಿಕ್ ಬಳಕೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ಅವರಿಗೂ ಒಂದೊಂದು ಗಿಡವನ್ನ ನೀಡುವುದರ ಮೂಲಕ ಹಸಿರೇ ಉಸಿರು ಎಂಬ

ಕಾರ್ಯಕ್ರಮವನ್ನ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ‌ ಖ್ಯಾತ ಹಿರಿಯ ವಕೀಲರಾದಂತಹ ಸತೀಶ್ ಸರ್ ,ರಾಜು ಸರ್ ಹಾಗೂ ಮಂಜುನಾಥ್ ರವರು ಭಾಗವಹಿಸಿದ್ದರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಅಶೋಕ ಗೋವಿಂದನಾಯಕ್ ,ಮಹೇಶ ಹಾಗೂ ಶಿವಕುಮಾರ್ ,ರವಿ ಹಾಗೂ ವಿವೇಕ ಟ್ರಸ್ಟ್ ನ ಸದಸ್ಯರು ಹಾಗೂ ಹಿತೈಷಿಗಳಾದ

ಲೋಕೇಶ್ ,ಅಭಿ ,ನಿಶಾಂತ್ ,ಭಾಗವಹಿಸಿದ್ದರು ಈ ವೇಳೆ ಮಾತನಾಡಿದ ವಿವೇಕ ಟ್ರಸ್ಟ್ ನ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರವರು ಉಸಿರಾಡುವುದಕ್ಕೆ ಗಾಳಿಯೇ ಇಲ್ಲವೆಂದಮೇಲೆ ಉಸಿರೇ ಇರುವುದಿಲ್ಲ ಆದ್ದರಿಂದ ಗಿಡಮರಗಳನ್ನ ನೆಟ್ಟು ಅದನ್ನು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದ್ದರಲ್ಲದೇ ಮುಂದೆ ಇದೇ ರೀತಿಯಾದ ಅನೇಕ ಕಾರ್ಯಕ್ರಮಗಳನ್ನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಲ್ಲರೂ ಸಹಕರಿಸಬೇಕೆಂದು ಕೋರಿದರು ಹುಣಸೂರು ತಾಲೂಕಿನ ಕಲ್ಕುಣಿಕೆ ರಂಗನಾಥ ಬಡಾವಣೆ ಪ್ರೌಢಶಾಲೆಯಲ್ಲಿ "ಹಸಿರೇ ಉಸಿರು"ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು,



3 ವರ್ಷದ ಮಗುವಿಗೆ ಬಲಾತ್ಕಾರ : ಸೌದಿ ಪ್ರಜೆಗೆ ಮರಣದಂಡನೆ


ರಿಯಾದ್: ಸೌದಿ ಅರೇಬಿಯಾದಲ್ಲಿ ಮೂರರ ಹರೆಯದ ಮಗುವಿನ ಮೇಲೆ ಬಲಾತ್ಕಾರ ಗೈದ ಆರೋಪದಲ್ಲಿ ಓರ್ವನಿಗೆ ಮರಣದಂಡನೆ ವಿಧಿಸಲಾಗಿದೆ. ಕಳೆದ ಮಂಗಳವಾರ ಬುರೈದಾದಲ್ಲಿ ಸೌದಿ ಪ್ರಜೆಯನ್ನು ಮರಣದಂಡನೆಗೆ ಗುರಿಪಡಿಸಲಾಗಿದ್ದು, ಈ ಬಗ್ಗೆ ಸೌದಿ ಗೃಹ ಖಾತೆ ಸ್ಪಷ್ಟಪಡಿಸಿದೆ.


ಮೂರರ ಹರೆಯದ ಮಗುವನ್ನು ಅಪಹರಿಸಿ, ಬಲಾತ್ಕಾರ ಗೈಯ್ಯಲಾಗಿದೆ ಎನ್ನುವ ಪ್ರಕರಣದಲ್ಲಿ ಅರೋಪಿಯನ್ನು ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಕ್ರಿಮಿನಲ್ ನ್ಯಾಯಾಲಯಕ್ಕೆ ಹಸ್ತಾಂತರಿಸಿ, ಆರೋಪಿಯ ವಿರುದ್ದ ಆರೋಪಪಟ್ಟಿ ತಯಾರಿಸಲಾಗಿತ್ತು.
ಕ್ರಿಮಿನಲ್ ನ್ಯಾಯಾಲಯವು ಆರೋಪಿಗೆ ಮರಣದಂಡನೆ ವಿಧಿಸಿ, ಈ ಕೃತ್ಯವು ಅತ್ಯಂತ ಹೇಯ ಮತ್ತು ಅರಾಜಕತೆ ಉಂಟು ಮಾಡಬಲ್ಲ ಅಮಾನವೀಯ ಕೃತ್ಯವಾಗಿದೆ ಎಂದು ಅಭಿಪ್ರಾಯಿಸಿದೆ.

ಕ್ರಿಮಿನಲ್ ನ್ಯಾಯಾಲಯದ ತೀರ್ಪನ್ನು ಅಪೀಲು ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಕಾನೂನು ಪ್ರಕಾರ ಶಿಕ್ಷೆ ವಿಧಿಸುವಂತೆ ರಾಜ ಕಲ್ಪನೆ ಪ್ರಕಾರ ಮಂಗಳವಾರ ಬೆಳಗ್ಗೆ ಬುರೈದಾದಲ್ಲಿ ಮರಣದಂಡನೆ ವಿಧಿಸಲಾಯಿತು ಎಂದು ಗೃಹ ಸಚಿವಾಲಯ ತಿಳಿಸಿದೆ.
ಕೃಪೆ : ಜನಧ್ವನಿ ನ್ಯೂಸ್

ಕೆಲಸ ಮಾಡಿತು ಇವರು ಕೊಟ್ಟ ‘ಐಡಿಯಾ’! ಶಮಿ ಹ್ಯಾಟ್ರಿಕ್‌ ಹಿಂದೆ ಯಾರಿದ್ದಾರೆ ಗೊತ್ತೇ?


 ಸೌಥಾಂಪ್ಟನ್, ಜೂ.23: ಇಲ್ಲಿ ಶನಿವಾರ ರಾತ್ರಿ ನಡೆದ ವಿಶ್ವಕಪ್‌ನ 28ನೇ ಪಂದ್ಯದಲ್ಲಿ ಮುಹಮ್ಮದ್ ಶಮಿ ಕೊನೆಯ ಓವರ್‌ನಲ್ಲಿ ನಡೆಸಿದ ಮ್ಯಾಜಿಕ್ ನಿಂದ ಭಾರತಕ್ಕೆ ಅಫ್ಘಾನಿಸ್ತಾನ ವಿರುದ್ಧ 11ರನ್‌ಗಳ ರೋಚಕ ಗೆಲುವು ದಾಖಲಿಸಲು ಸಾಧ್ಯವಾಗಿತ್ತು. ವಿಶ್ವಕಪ್‌ನಲ್ಲಿ ದುರ್ಬಲ ತಂಡವೆಂದೇ ಬಿಂಬಿತವಾಗಿರುವ ಅಫ್ಘಾನಿಸ್ತಾನ ವಿರುದ್ಧ ಸೋಲಿನ ದವಡೆಗೆ ಸಿಲುಕಿದ್ದ ಟೀಮ್ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡುವ ಜವಾಬ್ದಾರಿ ಕೊನೆ ಗಳಿಗೆಯಲ್ಲಿ ಸಿಕ್ಕಿದ್ದು

ಮುಹಮ್ಮದ್ ಶಮಿಗೆ. ಆದರೆ ಮುಹಮ್ಮದ್ ಶಮಿ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಉಡಾಯಿಸುವ ಮೂಲಕ ಭಾರತಕ್ಕೆ ಗೆಲುವು ತಂದು ಕೊಟ್ಟರು. ಕೊನೆಯ ಓವರ್ ನಲ್ಲಿ ಅಫ್ಘಾನಿಸ್ತಾನದ ಗೆಲುವಿಗೆ 16 ರನ್‌ಗಳ ಆವಶ್ಯಕತೆ ಇತ್ತು. ಮುಹಮ್ಮದ್ ಶಮಿ ಕೊನೆಯ ಓವರ್‌ನಲ್ಲಿ ದಾಳಿಗಿಳಿದಾಗ ಭಾರತೀಯ ಪಾಳಯದಲ್ಲಿ ಆತಂಕ ಮನೆ ಮಾಡಿತ್ತು. ಅಫ್ಘಾನಿಸ್ತಾನದ ಮುಹಮ್ಮದ್ ನಬಿ ಕ್ರೀಸ್‌ನಲ್ಲಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನಕ್ಕೆ ಗೆಲುವು ದೊರೆಯುವ ಎಲ್ಲ ಸಾಧ್ಯತೆ ಇತ್ತು. ಒತ್ತಡದ ಪರಿಸ್ಥಿತಿಯಲ್ಲಿ ಅನುಭವಿ ಬೌಲರ್‌ಗಳು ಕೆಲವೊಮ್ಮೆ ಎಡವುತ್ತಾರೆ. ಆದರೆ ಶಮಿ ಮಾತ್ರ ತನ್ನ ಅನುಭವದ ಮೂಲಕ ಅಫ್ಘಾನಿಸ್ತಾನದ ದಾಂಡಿಗರನ್ನು ಕಟ್ಟಿ ಹಾಕಿದರು. ಶಮಿ ಅವರ ಕೊನೆಯ ಓವರ್‌ನ ಮೊದಲ

ಎಸೆತವನ್ನು ನಬಿ ಬೌಂಡರಿಗಟ್ಟಿ ಅರ್ಧಶತಕ ಪೂರ್ಣಗೊಳಿಸರು. ಮುಂದೆ 5 ಎಸೆತಗಳಲ್ಲಿ ಅಫ್ಘಾನಿಸ್ತಾನದ ಗೆಲುವಿಗೆ 12 ರನ್ ಬೇಕಾಗಿತ್ತು. ನಬಿ ಅದೇ ಪ್ರದರ್ಶನವನ್ನು ಮುಂದುವರಿಸುವ ಯೋಜನೆಯಲ್ಲಿದ್ದರು. ಅಫ್ಘಾನಿಸ್ತಾನಕ್ಕೆ ಹ್ಯಾಟ್ರಿಕ್ ಬೌಂಡರಿಯಿಂದ ಗೆಲುವು ಸುಲಭವಾಗುತ್ತಿತ್ತು, ಈ ಹಂತದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಧೋನಿ ಅವರು ಶಮಿ ಬಳಿ ಓಡಿ ಬಂದು ಅಫ್ಘಾನಿಸ್ತಾನದ ದಾಂಡಿಗರನ್ನು ಕಟ್ಟಿ ಹಾಕಲು ಟಿಪ್ಸ್ ನೀಡಿದ್ದರು. ‘ಇನ್ನೂ ಬೌಂಡರಿ ಹೋಗುವ ಸಾಧ್ಯತೆ ಇದೆ. ಯಾರ್ಕರ್ ಹಾಕು. ನಿನ್ನ ಸಾಮರ್ಥ್ಯದ ಮೇಲೆ ನಂಬಿಕೆಯಿಟ್ಟು , ಕಾರ್ಯತಂತ್ರವನ್ನು ಕಾರ್ಯಗತಗೊಳಿಸು . ಹ್ಯಾಟ್ರಿಕ್ ಪಡೆಯುವ ಉತ್ತಮ ಅವಕಾಶ ನಿನ್ನ ಮುಂದೆ ಇದೆ ’’ಎಂದು ಸಲಹೆ ನೀಡಿದ್ದರು ಎನ್ನುವ ವಿಚಾರವನ್ನು ಶಮಿ ಪಂದ್ಯದ ಬಳಿಕ ಬಹಿರಂಗಗೊಳಿಸಿದ್ದಾರೆ. ಎರಡನೇ ಎಸೆತವನ್ನು ನಬಿ ರಕ್ಷಣಾತ್ಮಕವಾಗಿ ಆಡಿದರು. ಆದರೆ ಸಿಂಗಲ್ ತೆಗೆಯುವ ಸಾಹಸಕ್ಕೆ ನಬಿ ಮುಂದಾಗಲಿಲ್ಲ. ಮೂರನೇ ಎಸೆತವನ್ನು ನಿರೀಕ್ಷೆಯಂತೆ ನಬಿ ಬೌಂಡರಿ ಕಡೆಗೆ ತಳ್ಳಿದರು. ಆದರೆ ಚೆಂಡು ಬೌಂಡರಿ ಗೆರೆಯತ್ತ ಸಾಗುವ ಮೊದಲೇ ಹಾರ್ದಿಕ್ ಪಾಂಡ್ಯ ಕ್ಯಾಚ್ ತೆಗೆದುಕೊಂಡು ಪಂದ್ಯಕ್ಕೆ ಹೊಸ ತಿರುವು ನೀಡಿದರು. ಅಫ್ಘಾನಿಸ್ತಾನದ 8ನೇ ವಿಕೆಟ್ ಉರುಳುವುದರೊಂದಿಗೆ ಹೋರಾಟ ಬಹುತೇಕ ಅಂತ್ಯವಾಗಿತ್ತು. ಬಳಿಕ ಕ್ರೀಸ್‌ಗೆ
ಆಗಮಿಸಿದ ಅಫ್ತಾಬ್ ಆಲಂ ಮತ್ತು ಮುಜೀಬ್ ಉರ್ ರಹ್ಮಾನ್‌ನ್ನು ಸತತ ಎಸೆತಗಳಲ್ಲಿ ಬಂದ ದಾರಿಯಲ್ಲೇ ಶಮಿ ಹಿಂದಕ್ಕೆ ಕಳುಹಿಸುವ ಮೂಲಕ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು. ಈ ವಿಶ್ವಕಪ್‌ನಲ್ಲಿ ಮೊದಲ ಬಾರಿ ಅವಕಾಶ ಪಡೆದ ಶಮಿ ಹ್ಯಾಟ್ರಿಕ್ ವಿಕೆಟ್ ಪಡೆದರು. ಅವರ ಪ್ರದರ್ಶನ 9.5-1-40-4. ಈ ಮೊದಲು ಭಾಾರತದ ಚೇತನ್ ಶರ್ಮಾ 1987ರಲ್ಲಿ ಮೊದಲ ಹ್ಯಾಟ್ರಿಕ್ ಪಡೆದಿದ್ದರು. ಆ ಬಳಿಕ 32 ವರ್ಷಗಳಲ್ಲಿ ಭಾರತದ ಪರ ಇನ್ನೊಂದು ಹ್ಯಾಟ್ರಿಕ್ ದಾಖಲೆ ನಿರ್ಮಾಣವಾಗಿದೆ. ಶಮಿ ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವದ ಹತ್ತನೇ ಬೌಲರ್ ಎನಿಸಿಕೊಂಡಿದ್ದಾರೆ. ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಪಡೆದವರು 1987: ಚೇತನ್ ಶರ್ಮ(ಭಾರತ) 1999: ಸಕ್ಲೈನ್ ಮುಸ್ತಾಕ್(ಪಾಕಿಸ್ತಾನ) 2003: ಚಮಿಂಡ ವಾಸ್(ಶ್ರೀಲಂಕಾ) 2003: ಬ್ರೆಟ್ ಲೀ (ಆಸ್ಟ್ರೇಲಿಯ) 2007: ಲಸಿತ್ ಮಾಲಿಂಗ(ಶ್ರೀಲಂಕಾ) 2011: ಕೇಮರ್ ರೂಚ್(ವೆಸ್ಟ್‌ಇಂಡೀಸ್) 2015: ಸ್ಟೀವನ್ ಫಿನ್ (ಇಂಗ್ಲೆಂಡ್) 2015: ಜೆ.ಪಿ.ಡುಮಿನಿ(ದ. ಆಫ್ರಿಕ) 2019: ಮುಹಮ್ಮದ್ ಶಮಿ(ಭಾರತ)

"ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ'; ಗ್ರಾಮ ವಾಸ್ತವ್ಯ ಬಗ್ಗೆ ಬಿಜೆಪಿ ಟೀಕೆಗೆ ಸಿಎಂ ಎಚ್​ಡಿಕೆ ತಿರುಗೇಟು



ಬೆಂಗಳೂರು: ಕಾಂಗ್ರೆಸ್​ನೊಂದಿಗಿನ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮುಂದುವರೆಸಿದ್ದಾರೆ. ಈ ಹಿಂದೆ ಬಿಜೆಪಿ ಜೊತೆಗಿನ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರೇ ಆರಂಭಿಸಿದ್ದ ಗ್ರಾಮವಾಸ್ತವ್ಯದಿಂದ ಎಚ್​ಡಿಕೆಗೆ ದೊಡ್ಡ ಪ್ರಸಿದ್ಧಿ ತಂದುಕೊಟ್ಟಿತು. ಇದೀಗ ಮತ್ತೆ ಈ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.

ಕುಮಾರಸ್ವಾಮಿ ಅವರು ನೆನ್ನೆ ಮೌನ್ನೆ ಯಾದಗಿರಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮುಗಿಸಿದ್ದಾರೆ. ಎಚ್​ಡಿಕೆ ಅವರ ಈ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಾ, ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು, ಮೊದಲು ಆ ಬಗ್ಗೆ ಗಮನ ಹರಿಸಲಿ ಎಂದು ಹರಿಹಾಯುತ್ತಿದ್ದಾರೆ. ಈ ವಿಚಾರವಾಗಿ ಇಂದು ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಎಚ್​ಡಿಕೆ, ನಿಮ್ಮ ಟೀಕೆಗಳಿಗೆ ಮೌನವೇ ಉತ್ತರ ಎಂದು ಕುವೆಂಪು ಅವರ ವಾಕ್ಯವನ್ನು ಉಲ್ಲೇಖಿಸುವ ಮೂಲಕ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಜೂನ್​ 21ರ ಶುಕ್ರವಾರ ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲದೆ ಜನತಾ ದರ್ಶನ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಶನಿವಾರ (ಇಂದು) ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಹೇರೂರು ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕಿತ್ತು. ಆದರೆ, ಇಲ್ಲಿ ರಾತ್ರಿ ಇಡೀ ಭಾರೀ ಮಳೆಯಾದ ಕಾರಣ ವಾಸ್ತವ್ಯವನ್ನು ಮುಂದೂಡಲಾಗಿದೆ.
ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ.
- ಕುವೆಂಪು
☝🏻ಗ್ರಾಮ ವಾಸ್ತವ್ಯ ಕುರಿತ ವಿರೋಧ ಪಕ್ಷದ ನಾಯಕರ ಹುರುಳಿಲ್ಲದ ಟೀಕೆಗೆ ಇದೇ ನನ್ನ ಉತ್ತರ.

ಸರ್ಕಾರ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ನಾನು ನಿನ್ನೆ ಗ್ರಾಮ ವಾಸ್ತವ್ಯ ಮಾಡಿರುವುದು ಸಹ ಬರಪೀಡಿತ ಯಾದಗಿರಿ ಜಿಲ್ಲೆಯಲ್ಲೇ. @BSYBJP

186 people are talking about this