ಜೂ.14 ರಂದು ಕೃಷಿ ಅಭಿಯಾನ


 ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಜೂನ್, 14 ರಂದು ಸಂಪಾಜೆ ಹೋಬಳಿಯ ಮೇಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ “ಕೃಷಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸ್ಥಳೀಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.