ಜೂ.15 ರಂದು ಕಾಟಿಬೆಟ್ಟದ ಕತೆಗಳು ಪುಸ್ತಕ ಲೋಕಾರ್ಪಣೆ ಸಮಾರಂಭ
ಮಡಿಕೇರಿ -ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಬಿ.ಆರ್.ಜೋಯಪ್ಪ ಅವರು ಬರೆದ ಕಾಟಿಬೆಟ್ಟದ ಕತೆಗಳು ಪುಸ್ತಕ ಲೋಕಾರ್ಪಣೆ ಸಮಾರಂಭ ಜೂನ್, 15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.
ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಯಂ.ಪಿ.ಕೇಶವ ಕಾಮತ್, ಶಿವಮೊಗ್ಗದ ಕವಿಕಾವ್ಯ ಟ್ರಸ್ಟ್‍ನ ಖ್ಯಾತ ರಂಗಕರ್ಮಿ ಪ್ರಸನ್ನ, ನಿವೃತ್ತ ಪ್ರಾಧ್ಯಾಪಕರು ಹಾಗೂ ಮೈಸೂರಿನ ಖ್ಯಾತ ಜಾನಪದ ತಜ್ಞರಾದ ಪ್ರೊ.ಕಾಳೇಗೌಡ ನಾಗವಾರ, ಮೈಸೂರು ಆಕಾಶವಾಣಿಯ ಹೆಸರಾಂತ ಕತೆಗಾರರು ಹಾಗೂ ಕಾರ್ಯಕ್ರಮ ನಿರ್ವಾಹಕರಾದ ಅಬ್ದುಲ್ ರಶೀದ್, ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಮದೆ ಗ್ರಾಮದ ಕೃತಿಕಾರರಾದ ಬಿ.ಆರ್.ಜೋಯಪ್ಪ, ಮೈಸೂರು ಚಿಂತನ ಚಿತ್ತಾರ ಪ್ರಕಾಶನದ ಡಿ.ನಿಂಗರಾಜು ಚಿತ್ತಣ್ಣನವರ್ ಇತರರು ಪಾಲ್ಗೊಳ್ಳಲಿದ್ದಾರೆ.

No comments
Post a Comment