ಜೂ.15 ರಂದು ಕೌನ್ಸೆಲಿಂಗ್

No comments

ಜೂ.15 ರಂದು ಕೌನ್ಸೆಲಿಂಗ್
ಮಡಿಕೇರಿ :ಪ್ರಸಕ್ತ(2019-20) ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಎರಡನೇ ಸುತ್ತಿನ ಕೌನ್ಸೆಲಿಂಗ್ ಜೂನ್, 15 ರ ಬೆಳಗ್ಗೆ 10 ಗಂಟೆಗೆ ಡಿ. ದೇವರಾಜು ಅರಸ್ ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ ಇಲ್ಲಿ ನಡೆಯಲಿದೆ.
ಎರಡನೇ ಸುತ್ತಿನ ಕೌನ್ಸಿಲಿಂಗ್‍ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ ಹಾಗೂ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ  ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಅಗತ್ಯ ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್‍ಗೆ ಹಾಜರಾಗಬೇಕು. ಸೀಟುಗಳ ಲಭ್ಯತೆಯ ಅನುಸಾರ ಅಭ್ಯರ್ಥಿಗಳ ವರ್ಗವಾರು ಹಾಗೂ ಪಡೆದ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

No comments

Post a Comment