ಮಡಿಕೇರಿ ಜೂ.13 (ಕರ್ನಾಟಕ ವಾರ್ತೆ):-ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ವತಿಯಿಂದ ಜೂನ್, 17 ರಂದು ಬೆಳಗ್ಗೆ 10 ಗಂಟೆಗೆ ಬೆಣ್ಣೆ ಹಣ್ಣು ಮತ್ತು ಮಾಡಹಾಗಲದ ವೈವಿಧ್ಯತಾ ಮೇಳವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆಯಲಿದೆ. ಶಾಸಕರಾದ ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ಎಂ.ಆರ್.ದಿನೇಶ್, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ತೋಟಗಾರಿಕಾ ಉಪ ಮಹಾ ನಿರ್ದೇಶಕರಾದ ಡಾ.ಎ.ಕೆ.ಸಿಂಗ್ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಣ್ಣೆ ಹಣ್ಣು ಮತ್ತು ಮಾಡಾಗಲದ ವಿಚಾರ ಸಂಕಿರಣ ಮತ್ತು ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಆಸಕ್ತ ರೈತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಚೆಟ್ಟಳ್ಳಿ ಕೇಂದ್ರ ರೈತರಲ್ಲಿ ಮನವಿ ಮಾಡಿದೆ
ಜೂ.17 ರಂದು ಬೆಣ್ಣೆ ಹಣ್ಣು ಮತ್ತು ಮಾಡಹಾಗಲದ ವೈವಿಧ್ಯತಾ ಮೇಳ