ಜೂ.18 ರಂದು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅರ್ಜಿ ವಿತರಣೆ


ಮಡಿಕೇರಿ ಜೂ.13(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜೂನ್, 18 ರಂದು ಬಸ್ ಪಾಸ್ ಪಡೆದುಕೊಳ್ಳಲು ಅರ್ಜಿಯನ್ನು ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾ ಕೇಂದ್ರದಲ್ಲಿ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜು ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಪಡೆದುಕೊಂಡು ಬಸ್ ಪಾಸನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಬಸ್ ನಿಲ್ದಾಣದ ಮಾಹಿತಿ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಮಡಿಕೇರಿ ಘಟಕದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕ ವ್ಯವಸ್ಥಾಪಕರಾದ ಗೀತಾ ಅವರು ತಿಳಿಸಿದ್ದಾರೆ.