ಮಡಿಕೇರಿ ಜೂ.15(ಕರ್ನಾಟಕ ವಾರ್ತೆ):-ಮಾನ್ಯ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಜೂನ್, 19 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜೂನ್, 19 ರಂದು ಬೆಳಗ್ಗೆ 8 ಗಂಟೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ/ ಬರಪೀಡಿತ ಪ್ರದೇಶಗಳಿಗೆ ಭೇಟಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳು ಮತ್ತು ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಲಾಗುವ ಮನೆ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಹ/ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ವಸತಿ ಸಚಿವರ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಮುಂದೂಡಿಕೆ
ಮಡಿಕೇರಿ -ಮಾನ್ಯ ವಸತಿ ಸಚಿವರಾದ ಎನ್.ನಾಗರಾಜ ಎಂ.ಟಿ.ಬಿ ಅವರ ಜೂನ್, 16 ರ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಲಾಗಿದೆ ಎಂದು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಎಂ.ಕೆ.ಜಗದೀಶ್ ಅವರು ತಿಳಿಸಿದ್ದಾರೆ.
