ಮಡಿಕೇರಿ ಜೂ.17(ಕರ್ನಾಟಕ ವಾರ್ತೆ):-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗಮೇಳದಲ್ಲಿ 10-15 ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ವಾಹನ ಚಾಲನ ಪರವಾನಗಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಜೂ.21 ರಂದು ಉದ್ಯೋಗ ಮೇಳ