ಬೆಂಗಳೂರು, ಜೂ.10: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು (ಜೂ.10) ಒಂದು ದಿನ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ನಡೆಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕಾರ್ನಾಡ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾರ್ನಾಡ್ ನಿಧನ: ಇಂದು ಸರಕಾರಿ ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ, 3 ದಿನಗಳ ಶೋಕಾಚರಣೆ
ಬೆಂಗಳೂರು, ಜೂ.10: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು (ಜೂ.10) ಒಂದು ದಿನ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ನಡೆಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕಾರ್ನಾಡ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

No comments
Post a Comment