ವಿಕಲಚೇತನರಿಂದ ಅರ್ಜಿ ಆಹ್ವಾನ

No comments


ಮಡಿಕೇರಿ-ವಿಕಲಚೇತನರ ಎನ್‍ಪಿಆರ್‍ಪಿಡಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಡಿಕೇರಿ ತಾಲ್ಲೂಕಿನಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಒಂದು ಹುದ್ದೆ ಹಾಗೂ ನಗರಸಭೆ ಮತ್ತು 3 ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ (ಎನ್‍ಪಿಆರ್‍ಪಿಡಿ) ಮಡಿಕೇರಿ ತಾಲ್ಲೂಕಿನಾದ್ಯಂತ ಕೆಲಸ ನಿರ್ವಹಿಸಲು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಒಂದು ಹುದ್ದೆ ಖಾಲಿ ಇದ್ದು ಈ ಹುದ್ದೆಗೆ ಮಾಸಿಕ ಗೌರವಧನ ರೂ.6 ಸಾವಿರ ನೀಡಲಾಗುವುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು ವಿಕಲಚೇತನರಾಗಿದ್ದು, ವಿಕಲಚೇತನತೆಯ ಸ್ವರೂಪ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆಯಿರಬೇಕು. 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು.
ನಗರಸಭೆ ಮಡಿಕೇರಿಯಲ್ಲಿ ಹಾಗೂ 3 ಪಟ್ಟಣ ಪಂಚಾಯಿತಿಗಳಾದ ಸೋಮವಾರಪೇಟೆ, ಕುಶಾಲನಗರ ಮತ್ತು ವಿರಾಜಪೇಟೆಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ಭರ್ತಿ ಮಾಡಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಥಳೀಯ ನಗರಸಭೆ, ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.  ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸಲು ಮಾಸಿಕ ಗೌರವಧನದ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.  ಕಾರ್ಯಕರ್ತರಿಗೆ ಮಾಸಿಕ ರೂ.3 ಸಾವಿರಗಳ ಗೌರವಧನ ನೀಡಲಾಗುವುದು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸುವ ವಿಕಲಚೇತನರು 10ನೇ ತರಗತಿ ಉತ್ತೀರ್ಣ/  ಅನುತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.  18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ವಿಕಲಚೇತನತೆಯ ಸ್ವರೂಪ ಶೇ.40ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆಯಿರಬೇಕು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇರುವ ಗ್ರಾ.ಪಂ.ಗಳ ಪಟ್ಟಿ. ಮಡಿಕೇರಿ ತಾಲ್ಲೂಕಿನ ಬೇಂಗೂರು, ಬಲ್ಲಮಾವಟಿ, ಚೆಂಬು, ಕೆ.ನಿಡುಗಣೆ, ಕುಂದಚೇರಿ, ಕುಂಜಿಲ, ಸಂಪಾಜೆ,  ಕೊಣಂಜಗೇರಿ, ನರಿಯಂದಡ, ಎಮ್ಮೆಮಾಡು, ಬೆಟ್ಟಗೇರಿ, ಹೊದ್ದೂರು.
ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟ, ಬೆಟ್ಟದಳ್ಳಿ, ಬೇಳೂರು, ಚೆಟ್ಟಳ್ಳಿ, ದುಂಡಳ್ಳಿ, ದೊಡ್ಡಮಳ್ತೆ, ಹಂಡ್ಲಿ, ಕಂಬಿಬಾಣೆ, ನೇರುಗಳಲೆ, ಶನಿವಾರಸಂತೆ, ನಾಕೂರು ಶಿರಂಗಾಲ, ಕೆದಕಲ್, ಚೌಡ್ಲು, ಹರದೂರು, ಐಗೂರು, ಕಿರಗಂದೂರು,
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಅರುವತ್ತೋಕ್ಲು, ಬಾಳೆಲೆ, ಬಿಟ್ಟಂಗಾಲ, ಬಿರುನಾಣಿ, ಬಿ.ಶೆಟ್ಟಿಗೇರಿ, ಬಲ್ಯಮಂಡೂರು, ಚಂಬೆಬೆಳ್ಳೂರು, ದೇವರಪುರ, ಗೋಣಿಕೊಪ್ಪ, ಹೊಸೂರು, ಹುದಿಕೇರಿ, ಹಾಲುಗುಂದ, ಕಾನೂರು, ಮಾಯಮುಡಿ, ನಿಟ್ಟೂರು, ನಾಲ್ಕೇರಿ, ಪೊನ್ನಂಪೇಟೆ, ಪೊನ್ನಪ್ಪಸಂತೆ, ಸಿದ್ದಾಪುರ, ಟಿ.ಶೆಟ್ಟಿಗೇರಿ, ಆರ್ಜಿ, ಕೆ.ಬಾಡಗ, ಕಿರುಗೂರು, ಪಾಲಿಬೆಟ್ಟ, ತಿತಿಮತಿ, ಶ್ರೀಮಂಗಲ.
ಆಸಕ್ತ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು  ಜೂನ್, 25 ರೊಳಗೆ ಕಚೇರಿಗೆ ತಲುಪುವಂತೆ ಕಳುಹಿಸಬಹುದಾಗಿದೆ. ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರು ಅರ್ಜಿ ಸಲ್ಲಿಸುವಂತೆ ಕೋರಿದೆ.  ಹೆಚ್ಚಿನ ವಿವರಗಳಿಗೆ ಈ ಕಚೇರಿಯ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ:08272-222830 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

No comments

Post a Comment