ಪ್ರತಿವರ್ಷ ಜೂನ್ ೧೪ನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಣೆಮಾಡಲಾಗುತ್ತದೆ. ಒಬ್ಬ ವ್ಯಕ್ತಿ ಸ್ವಯಂ ಪ್ರೇರಣೆಯಿಂದ ರಕ್ತ ನೀಡಲು ಬಂದಾಗ ರಕ್ತ ದಾನ ಎಂದು ಕರೆಯಲಾಗುತ್ತದೆ. ಹಲವಾರು ಶ್ರೇಷ್ಠ ದಾನಗಳಲ್ಲಿ ರಕ್ತದಾನವು ಒಂದಾಗಿದೆ. ನಮ್ಮ ದೇಹದ ನರ ನಾಡಿಯಲ್ಲಿ ಹರಿಯುವ ರಕ್ತವನ್ನು ದಾನ ಮಾಡಿದರೆ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಯಬಹುದು. ರಕ್ತದಾನದ ಕುರಿತಾದ ವಿಶೇಷ ಮಾಹಿತಿ ನಿಮಗಾಗಿ…
18 ರಿಂದ 60 ವರ್ಷ ವಯಸ್ಸಿನ, 50 ಕೆಜಿಗಿಂತ ಹೆಚ್ಚು ತೂಕ ಹೊಂದಿದವರು ರಕ್ತದಾನ ಮಾಡಬಹುದು.
ಎಚ್ ಐವಿ, ಕ್ಯಾನ್ಸರ್, ಅಸ್ತಮಾ, ಕ್ಷಯ, ರೇಬೀಸ್, ಮಧುಮೇಹ ಕಾಯಿಲೆಗಳಿಂದ ಬಳಲುತ್ತಿರುವವರು ರಕ್ತದಾನ ಮಾಡುವಂತಿಲ್ಲ.
ರಕ್ತದಲ್ಲಿ ಹಿಮೋಗ್ಲೊಬಿನ್ ಪ್ರಮಾಣ 12.5 ಗ್ರಾಮ್ ಇದ್ದರೆ ಮಾತ್ರ ರಕ್ತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ರಕ್ತದಾನ ಮಾಡುವ ವ್ಯಕ್ತಿಯ ನಾಡಿಮಿಡಿತ ನಿಮಿಷಕ್ಕೆ 50-100 ಇರಬೇಕು.
ಒಮ್ಮೆ ರಕ್ತದಾನ ಮಾಡಿದ ಮೇಲೆ ಕನಿಷ್ಠ 56 ದಿನದ ನಂತರವೇ ರಕ್ತದಾನ ಮಾಡಬಹುದು.
ರಕ್ತದಾನ ಮಾಡುವವರು ಮದ್ಯಪಾನ ಮಾಡಿರಬಾರದು.
ರಕ್ತದಾನದ ನಂತರ ಏನುಮಾಡಬೇಕು?
ರಕ್ತದಾನ ಮಾಡಿದ ನಂತರ ೨೦ ನಿಮಿಷಗಳ ಕಾಲ ಯಾವುದೇ ಕೆಲಸ ಮಾಡಬಾರದು . ಬಳಿಕ ಲೋಟ ಹಣ್ಣಿನ ರಸ ಸೇವಿಸಬೇಕು. ಹೀಗೆ ಮಾಡಿದರೆ ಮಾತ್ರ ನೀವು ಆರೋಗ್ಯದಿಂದ ಇರಲು ಸಾಧ್ಯ.
ಮೊಟ್ಟ ಮೊದಲ ಬಾರಿ ವಿಶ್ವ ರಕ್ತದಾನ ದಿನ ಆಚರಿಸಿದ್ದು 2004ರಲ್ಲಿ. 2005ರಲ್ಲಿ ನಡೆದ 58ನೇ ವರ್ಲ್ಡ್ ಹೆಲ್ತ್ ಅಸೆಂಬ್ಲಿಯಲ್ಲಿಪ್ರತಿವರ್ಷ ಜೂನ್ 14ರಂದು ವಿಶ್ವ ರಕ್ತದಾನ ದಿನ ಆಚರಿಸಲು ತೀರ್ಮಾನಿಸಲಾಯಿತು. ಆಸ್ಟ್ರೇಲಿಯನ್ ಮೂಲದ ಜೀವಶಾಸ್ತ್ರಜ್ಞ ಹಾಗೂ ಫಿಸಿಷಿಯನ್ ಡಾ.ಕಾರ್ಲ್ ಲ್ಯಾಂಡ್ಸ್ಟೀನರ್(1868-1943) ಹುಟ್ಟಿದ್ದು ಇದೇ ದಿನ. ಅವರನ್ನು ಆಧುನಿಕ ರಕ್ತವರ್ಗಾವಣೆಯ ‘ಸಂಸ್ಥಾಪಕ’ ಎಂದು ಪರಿಗಣಿಸಲಾಗುತ್ತದೆ. ಅವರು 1901ರಲ್ಲಿ ಎಬಿಒ ರಕ್ತದ ಗುಂಪುಗಳ ವರ್ಗೀಕರಣ ಮಾಡುವಲ್ಲಿ ಸಫಲರಾಗಿದ್ದರು. 1937ರಲ್ಲಿ ಅಲೆಕ್ಸಾಂಡರ್ ವೈನರ್ ಜತೆ ಸೇರಿ ರಕ್ತದ ವರ್ಗೀಕರಣಕ್ಕೆ ಹಾಗೂ ಗುರುತಿಸುವಿಕೆಗೆ ಆಧುನಿಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದರು. ಈ ಸಾಧನೆಯನ್ನು ಗೌರವಿಸುವ ಸಲುವಾಗಿ ವಿಶ್ವ ರಕ್ತದಾನ ದಿನ ಆಚರಿಸಲು ತೀರ್ಮಾನಿಸಲಾಯಿತು. ಈ ವರ್ಷದ ವಿಶ್ವ ರಕ್ತದಾನ ದಿನದ ಥೀಮ್ ‘ರಕ್ತ ನಮ್ಮನ್ನೆಲ್ಲ ಬೆಸೆಯುತ್ತದೆ’.ಅದು ಜೀವ ಉಳಿಸುವ ಮಹಾದಾನ ಎಂಬ ಅರಿವನ್ನು ಜನರಲ್ಲಿ ಮೂಡಿಸಲಾಗುತ್ತದೆ.
. . . .
– ರಕ್ತಕ್ಕೆ ಪರ್ಯಾಕವಾದ (ಬದಲಿಯಾದ) ವಸ್ತುವಿಲ್ಲ.
– ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ.
– ರಕ್ತವನ್ನು ಮನುಷ್ಯರದಾನದಿಂದ ಮಾತ್ರ ಪಡೆಯಬಹುದು.
– ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ, ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿಯಾಗಿ 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.
– ಒಂದೆರಡು ವಾರಗಳಲ್ಲಿ ರಕ್ತದ ಎಲ್ಲಾ ಅಂಶಗಳು ದಾನಿಯ ರಕ್ತದಲ್ಲಿ ಸಂಪೂರ್ಣವಾಗಿ ತುಂಬಿಕೊಳ್ಳುತ್ತದೆ.
– ರಕ್ತದಾನ ಮಾಡುವಾಗ, ಒಂದು ಚುಚ್ಚುಮದ್ದು ತೆಗೆದುಕೊಂಡಷ್ಟೇ ನೋವಿರುತ್ತದೆ.
– ರಕ್ತದಾನಮಾಡಲು ಮತ್ತು ಸುಧಾರಿಸಿಕೊಳ್ಳಲು ಕೇವಲ 20 ನಿಮಿಷ ಮಾತ್ರ ಸಾಕು.
– ರಕ್ತದಾನ ಮಾಡುವಾಗ ಒಮ್ಮೆಗೆ 350mಟ ರಕ್ತ ಮಾತ್ರ ತೆಗೆಯಲಾಗುವುದು. ಸಾಮಾನ್ಯವಾಗಿ ಮನುಷ್ಯನ ದೇಹದಲ್ಲಿ 5 ರಿಂದ 6 ಲೀಟರ್ ರಕ್ತ ಇರುತ್ತದೆ.
– ರಕ್ತದಾನ ಮಹಾದಾನ, ಇದಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ.
ಯಾರು ರಕ್ತದಾನ ಮಾಡಬಹುದು ?
? ಹೆಣ್ಣು ಗಂಡೆಂಬ ಬೇಧ ಭಾವವಿಲ್ಲದೆ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.
? ಗಂಡಸರು 3 ತಿಂಗಳಿಗೆ ಒಮ್ಮೆ ಮತ್ತು ಹೆಂಗಸರು 6 ತಿಂಗಳಿಗೆ ಒಮ್ಮೆ ರಕ್ತದಾನ ಮಾಡಬಹುದು.
? ರಕ್ತದಾನಿಯ ತೂಕ ಕನಿಷ್ಠ 45 ಕೆ.ಜಿ ಗಿಂತ ಜಾಸ್ತಿ ಇರಬೇಕು.
? ರಕ್ತದಾನಿಯ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು.
ಯಾರು ರಕ್ತದಾನ ಮಾಡಬಾರದು ?
• ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುವವರು ರಕ್ತದಾನ ಮಾಡಬಾರದು.
• ಮಧ್ಯಪಾನ ಮತ್ತು ಮಾಧಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು.
• ಮಹಿಳೆಯರು ತಿಂಗಳ ಮುಟ್ಟಿನ ಸಮಯದಲ್ಲಿ , ಗರ್ಭಿಣಿಯಾಗಿದ್ದಾಗ, ಎದೆಹಾಲು ಉಣಿಸುತ್ತಿರುವಾಗ ಮತ್ತು ಹೆರಿಗೆಯ ನಂತರ 6 ತಿಂಗಳು ರಕ್ತದಾನ ಮಾಡಬಾರದು.
• ಯಾವುದೇ ವ್ಯಕ್ತಿ ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ, ಅಂತವರು ಲಸಿಕೆ ಪಡೆದ 4 ವಾರಗಳವರೆಗೆ ರಕ್ತದಾನ ಮಾಡಬಾರದು.
• ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ, ಚಿಕಿತ್ಸೆ ಪಡೆದ ನಂತರದ 3 ತಿಂಗಳು ರಕ್ತದಾನ ಮಾಡಬಾರದು.
• ಹಿಂದಿನ 3 ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು.
• ಕಾಮಾಲೆ , ಹೆಚ್.ಐ.ವಿ. ಮತ್ತು ಯಾವುದೇ ಲೈಂಗಿಕ ರೋಗವಿರುವವರು ರಕ್ತದಾನ ಮಾಡಬಾರದು.
• ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 6 ತಿಂಗಳವರೆಗೆ ಮಾತ್ರ ಚಿಕ್ಕ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾದವರು ಮುಂದಿನ 3 ತಿಂಗಳವರೆಗೆ ರಕ್ತದಾನ ಮಾಡಬಾರದು.
• ಅರ್ಬುದ ರೋಗ, ಹೃದಯ ಸಂಬಂಧಿ ಕಾಯಿಲೆ, ಅಸಹಜ ರಕ್ತಸ್ತ್ರಾವ, ಮಧುಮೇಹ, ಮೂತ್ರಪಿಂಡದಕಾಯಿಲೆ ಮತ್ತು ಯಕೃತ್, ಲಿವರ್ಗೆ ಸಂಬಂಧಿಸಿದ ಕಾಯಿಲೆ ಇರುವವರು, ಹೆಪಟೈಟಿನ್ ‘ಬಿ’ ಮತ್ತು ‘ಸಿ’ ಕಾಯಿಲೆಯಿರುವವರು ರಕ್ತದಾನ ಮಾಡಬಾರದು.
ಪರೀಕ್ಷೆಗೆ ಒಳಪಡದ ರಕ್ತದ ಮೂಲಕ ಹರಡಬಹುದಾದ ರೋಗಗಳು :
• ಮಲೇರಿಯಾ
• ಲೈಂಗಿಕ ಸಂಪರ್ಕದ ರೋಗಗಳು – ಸಿಫಿ಼ಲಿಸ್ ಇತ್ಯಾದಿ.
• ಹೆಪಟೈಟಿನ್ ‘ಬಿ’ ಮತ್ತು ‘ಸಿ’ ಸೋಂಕಿನಿಂದುಂಟಾಗುವ ಕಾಮಾಲೆ ರೋಗ.
• *ಹೆಚ್.ಐ.ವಿ ಸೋಂಕು ಮತ್ತು ಏಡ್ಸ್ ರೋಗ.*
ರಕ್ತವನ್ನು ಯಾವುದೇ ವ್ಯಕ್ತಿಗೆ ನೀಡುವ ಮೊದಲು ರಕ್ತದ ಮೇಲಿನ ಎಲ್ಲಾ ರೋಗಗಳಿಂದ ಮುಕ್ತವಾಗಿದೆ ಎಂದು ತಿಳಿಯಲು ರಕ್ತದಾನ ಮಾಡುವ ಮೊದಲು ಎಲ್ಲಾ ರೀತಿಯ ಪರೀಕ್ಷೆ ನಡೆಸಲಾಗುತ್ತದೆ. ಈ ಕಾರಣಕ್ಕಾಗಿಯೇ ಬದಲಿ ರಕ್ತ ನೀಡಿದರೂ ಒಂದು ಬಾಟಲ್ (350) ರಕ್ತಕ್ಕೆ ಕನಿಷ್ಠ 300 ರಿಂದ 400 ರೂಪಾಯಿ ವೆಚ್ಚ ತಗಲುತ್ತದೆ.
ರಕ್ತದಾನ ಮಾಡುವುದರಿಂದ ದಾನಿಗಳಿಗೆ ಆಗುವ ಪ್ರಯೋಜನಗಳು :
(1) ರಕ್ತದಾನ ಮಾಡುವುದರಿಂದ ದಾನಿಯ ರಕ್ತದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಸಿಗುತ್ತದೆ.
(2) ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯತತ್ಪರತೆ, ಜಾಪಕ ಶಕ್ತಿ ವೃದ್ಧಿಯಾಗುತ್ತದೆ.
(3) ದೇಹದಲ್ಲಿ ಕೊಬ್ಬಿನ ಅಂಶ (ಕೊಲೆಸ್ಟ್ರಾಲ್) ಕಡಿಮೆ ಮಾಡಲು ಸಹಾಯವಾಗುತ್ತದೆ.
(4) ಹೃದಯಾಘಾತವನ್ನು ಶೇ 80ಕ್ಕಿಂತಲೂ ಜಾಸ್ತಿ ತಡೆಯಲು ಸಹಾಯವಾಗುತ್ತದೆ.
(5) ರಕ್ತದ ಒತ್ತಡ, ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯಕವಾಗುತ್ತದೆ.
(6) ಎಲ್ಲಕ್ಕಿಂತ ಮಿಗಿಲಾಗಿ ಒಂದು ‘ಜೀವ’ ಉಳಿಸಿದಂತಾಗುತ್ತದೆ.
