ಬೆಂಗಳೂರು, ಜೂ.10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹಿತ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕಂಬನಿ ಮಿಡಿದಿದ್ದಾರೆ. ಕಾರ್ನಾಡ್ ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥಿತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ. ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಮುಖ್ಯಮಂತ್ರಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಎಚ್.ಡಿ.ದೇವೇಗೌಡ: ಕನ್ನಡಕ್ಕೆ 7ನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರ ಅಭಿಮಾನಿ ವರ್ಗ ಹಾಗೂ ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಂದು ಟ್ವೀಟ್ ಮಾಡಿದ್ದಾರೆ. ಡಾ.ಜಿ.ಪರಮೇಶ್ವರ್: ದೇಶ ಕಂಡ ಅತ್ಯುತ್ತಮ ರಂಗಕರ್ಮಿ ಹಾಗೂ ಬರಹಗಾರರಲ್ಲೊಬ್ಬರಾದ ಜ್ಞಾನಪೀಠ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಅಗಲಿಕೆಯ ವಿಚಾರ ತಿಳಿದು ದಿಗ್ಭ್ರಮೆಯಾಗಿದೆ. ಕನ್ನಡ ಮತ್ತು ಭಾರತ ಸಾಹಿತ್ಯ ಹಾಗೂ ನಾಟಕ ಲೋಕಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ. ಯಡಿಯೂರಪ್ಪ: ನಾಡಿನ ಖ್ಯಾತ ಸಾಹಿತಿ, ಪ್ರಸಿದ್ಧ ನಾಟಕಕಾರ, ಜ್ಞಾನ ಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಅವರ ನಿಧನವು ನಾಡಿಗಾದ ಭರಿಸಲಾಗದ ನಷ್ಟ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಂತಾಪ ಸೂಚಿಸಿದ್ದಾರೆ. ಕಾರ್ನಾಡ್ ಅವರ ಕೊಡುಗೆಯನ್ನು ವಿಶೇಷವಾಗಿ ರಂಗಭೂಮಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಯಾರೂ ಕೂಡ ಮರೆಯಲು ಸಾಧ್ಯವಿಲ್ಲ. ಜೊತೆಗೆ ಸ್ವತಃ ನಟರಾಗಿ ತಮ್ಮ ಪ್ರತಿಭೆಯ ಮೂಲಕ ಪ್ರಸಿದ್ಧಿಯಾಗಿದ್ದರು. ಅನೇಕ ಸಾಹಿತ್ಯ ಕೃತಿಗಳನ್ನು ನೀಡಿದ ಅವರು ಕನ್ನಡಿಗರು ಹೆಮ್ಮೆಯಿಂದ ಸಾಧಿಸಲು ಸ್ಫೂರ್ತಿ ತುಂಬಿದವರು. ನಾಟಕ ಕ್ಷೇತ್ರದ ಸಾಧನೆಯ ಮೂಲಕವೇ ಅತ್ಯುನ್ನತ ಜ್ಞಾನ ಪೀಠ ಪ್ರಶಸ್ತಿಯನ್ನು ಪಡೆದಿದ್ದು ಅವರ ಪ್ರತಿಭೆಗೆ ಸಾಕ್ಷಿ. ಅವರ ಅಪಾರ ಅಭಿಮಾನಿಗಳು, ಬಂಧುಬಳಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. - ಬಿ.ಎಸ್.ವೈ. ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಗಿರೀಶ್ ಕಾರ್ನಾಡ್ ನಿಧನಕ್ಕೆ ಗಣ್ಯರ ಸಂತಾಪ

No comments
Post a Comment