ಮಡಿಕೇರಿ ಜೂ.20(ಕರ್ನಾಟಕ ವಾರ್ತೆ):-2019-20 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ, 12 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: 08272-228431 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ *************************
ಮಡಿಕೇರಿ ಜೂ.20(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಪ್ರಥಮ ಪ್ರಯತ್ನದಲ್ಲಿ ಶೇ.60-74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.7 ಸಾವಿರಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15 ಸಾವಿರಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್‍ಸೈಟ್ ಮೂಲಕ ತಪ್ಪದೇ ನೋಂದಾಯಿಸಿಕೊಳ್ಳುವುದು. ಆನ್‍ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1 ನೇ ಮಹಡಿ, ಲೋಟಸ್ ಟವರ್ಸ್, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು ದೂ.ಸಂಖ್ಯೆ : 080-22261787 ಇಲಾಖಾ ದೂರವಾಣಿ-080-22261789 ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115 ಹಾಗೂ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.
