ಐಎಂಎ ಸಂಸ್ಥೆಯಿಂದ ವಂಚನೆ ಪ್ರಕರಣ: ಎಸ್ಐಟಿ ತನಿಖೆಗೆ ಆದೇಶಿಸಿದ ಸಿಎಂ ಕುಮಾರಸ್ವಾಮಿ

No comments

 ಬೆಂಗಳೂರು, ಜೂ.11: ಐಎಂಎ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಖಾನ್ ಎಂದು ಪರಿಚಯಿಸಿಕೊಂಡಿರುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ, ನಗರ ಪೊಲೀಸ್ ಆಯುಕ್ತರಿಗೆ ಕಳುಹಿಸಿರುವ ಆಡಿಯೋ ಸಂದೇಶ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಂಸ್ಥೆಯ ವಂಚನೆ ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 'ಐಎಂಎ ವಂಚನೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯ ಹೊಣೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡಲಾಗಿದೆ. ಈ ಬಗ್ಗೆ ಡಿಜಿಪಿಗೆ ಸೂಚನೆ ನೀಡಲಾಗಿದೆ' ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

No comments

Post a Comment