ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ 

No comments

ಮಡಿಕೇರಿ ಜೂ.07(ಕರ್ನಾಟಕ ವಾರ್ತೆ):-ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಜೂನ್, 08, 09 ಮತ್ತು 16 ರಂದು ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಹಾಗೂ ಅವ್ಯವಹಾರಗಳಿಗೆ ಅವಕಾಶವಿರದಂತೆ ಸುಗಮವಾಗಿ ಪರೀಕ್ಷೆಯನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳಾದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ), ಸರ್ಕಾರಿ ಪದವಿ ಪೂರ್ವ ಕಾಲೇಜು(ಪದವಿ ಪೂರ್ವ), ಸಂತ ಜೋಸೆಫರ ಸಂಯುಕ್ತ ಬಾಲಕಿಯರ ಪ್ರೌಢ ಶಾಲೆ ಹಾಗೂ ಸಂತ ಮೈಕಲ್‍ರ ಪ್ರೌಢ ಶಾಲೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರಾದ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

No comments

Post a Comment