ರಾಜ್ಯ ಸುದ್ದಿ ಭೂಗಳ್ಳರಿಗೆ ಸಹಕರಿಸುತ್ತಿರುವ ಅಧಿಕಾರಿಗಳನ್ನು ಜೈಲಿಗೆ ತಳ್ಳಿ: ದೊರೆಸ್ವಾಮಿ ಒತ್ತಾಯ


ಬೆಂಗಳೂರು,ಜೂನ್.15: ಭೂಗಳ್ಳರಿಗೆ ಸಹಕರಿಸುತ್ತಿರುವ ಅಧಿಕಾರಿಗಳನ್ನು ಜೈಲಿಗೆ ತಳ್ಳಿ ಎಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಸದಸ್ಯರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್. ದೊರೆಸ್ವಾಮಿಯವರು ಒತ್ತಾಯಿಸಿದ್ದಾರೆ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿದ್ದ ದೊರೆಸ್ವಾಮಿಯವರು, ಬಿಬಿಎಂಪಿ, ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ನಾನು ಒತ್ತುವರಿಯಾಗಿರುವ ಕೆರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇ ಎಂದು ಹೇಳಿದ್ದಾರೆ. ಒತ್ತುವರಿಯಾಗಿರುವ ಕೆರೆ ಭಾಗವನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದ್ದೆ. ಆದರೆ ಭರವಸೆ ನೀಡಿದ್ದ ಅಧಿಕಾರಿಗಳು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಕ್ಷಣವೇ ಒತ್ತುವರಿ ತೆರವು ಮಾಡಿ ಎಂದು ಇದೇ ಸಂದರ್ಭ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.