ಜೋಧ್ಪುರ್: ಕಾರು ಅಪಘಾತದಲ್ಲಿ ವಿಶ್ವಪ್ರಸಿದ್ಧ ಜಾನಪದ ನೃತ್ಯಗಾರ ಹರೀಶ್ ಕುಮಾರ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.ಭಾನುವಾರ ಮುಂಜಾನೆ ಎಸ್ಯುವಿ ಕಾರಿನಲ್ಲಿ ಅಜ್ಮೀರದಿಂದ ಜೈಸಲ್ಮೇರ್ಕ್ಕೆ ತೆರಳುತ್ತಿದ್ದ ವೇಳೆ ಇಲ್ಲಿಯ ಕಪರ್ದ ಬಳಿ ಟ್ರಕ್ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್, ರವೀಂದ್ರ, ಭಿಖೆ ಖಾನ್ ಹಾಗೂ ಲತಿಫ್ ಖಾನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇನ್ನುಳಿದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ದುರಂತ ನಡೆದಿರುವುದಾಗಿ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ್ದ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ

No comments
Post a Comment