ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ. 

No comments

ಕನ್ನಡ ರಿಪೋರ್ಟರ್ ನ್ಯೂಸ್ 
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಂಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಮಳೆ ಆಗಿದೆ. ಕೊಡಗಿನಲ್ಲಿ ಸೋಮವಾರ ಇಡೀ ದಿನ ಜಡಿ ಮಳೆ ಸುರಿಯಿತು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಶೀತ ಗಾಳಿಯೂ ಬೀಸುತ್ತಿದೆ. ಮಡಿಕೇರಿ ನಗರ, ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಕಕ್ಕಬ್ಬೆ, ಹೊದ್ದೂರು, ಮೂರ್ನಾಡು, ಪಾರಾಣೆ, ವಿರಾಜಪೇಟೆ, ಬಲಮುರಿ, ಮೇಕೇರಿ, ಕುಶಾಲನಗರ, ಸುಂಟಿಕೊಪ್ಪ, ಸಿದ್ದಾಪುರದಲ್ಲಿ ಮಧ್ಯಾಹ್ನದ ನಂತರ ಮಳೆ ಹನಿಯಾಗಿ ಸುರಿಯಲು ಆರಂಭಿಸಿತು. ಸಂಜೆ ನಂತರ ಚುರುಕು ಪಡೆಯಿತು. ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

No comments

Post a Comment