ಬೆಂಗಳೂರು: ರಾಜ್ಯ ಸರ್ಕಾರವು ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ಮುಂಬರುವ ದಿನಗಲ್ಲಿ 1.117 ಕಿ.ಮೀ ರಸ್ತೆ ನಿರ್ಮಾಣಕ್ಕೆ ನಿರ್ಧರಿಸಿರುವ ರಾಜ್ಯ ಸರ್ಕಾರ ಎಲ್ಲ ರಸ್ತೆಗಳಲ್ಲೂ ಬಳಕೆದಾರರಿಗೆ ಟೋಲ್ ಶುಲ್ಕ ವಿಧಿಸಲು ಮುಂದಾಗಿದೆ.
2011ರಲ್ಲಿ ಪ್ರಕಟವಾದ ಸರ್ಕಾರಿ ಆದೇಶದ ಪ್ರಕಾರ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಿಧಿಸುವುದನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ರಾಜ್ಯ ಹೆದ್ದಾರಿ ಪ್ರಾಧಿಕಾರ,ಕೆ-ಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ 25,800 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳು ನಿರ್ಮಾಣವಾಗಲಿದೆ.
ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 37 ಸಾವಿರ ಕೋಟಿ ರೂ. ವೆಚ್ಚದಲ್ಲಿ 3,600 ಕಿ.ಮೀ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭವಾಗಿದೆ. ಹೆಚ್ಚುವರಿಯಾಗಿ 6,572 ಕಿಮೀ ರಸ್ತೆ ನಿರ್ಮಾಣಕ್ಕೆ ನಾವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಸಚಿವರು ತಿಳಿಸಿದರು.

No comments
Post a Comment