ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ


 ಮಡಿಕೇರಿ ಜೂ.13(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿನ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ತರಬೇತಿ ಪಡೆಯಲು ಇರಬೇಕಾದ ಅರ್ಹತೆಗಳು ಹಾಗೂ ನಿಬಂಧನೆಗಳು:- ಅಭ್ಯರ್ಥಿಗಳು ವರ್ಗ 1 ಮತ್ತು ಪ್ರವರ್ಗ 2ಎ, 3ಎ, 3ಬಿ ಗೆ ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ 3,50,000 ಹಾಗೂ ಪ್ರವರ್ಗ 2ಎ, 3ಎ, 3ಬಿ ಗೆ ರೂ.2,50,000 ಒಳಪಟ್ಟಿರಬೇಕು. ಪ್ರವರ್ಗ1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ 1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು.