ಮಡಿಕೇರಿ :-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2019-20ನೇ ಸಾಲಿಗೆ ಪರಿಶಿಷ್ಟ ಪಂಗಡ ಜನರಿಗೆ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ ಹಾಗೂ ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವ್ವಾನಿಸಲಾಗಿದೆ.
ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ, ವಿರಾಜಪೇಟೆ ತಾಲ್ಲೂಕು ಹಾಗೂ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮಡಿಕೇರಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

No comments
Post a Comment