ಕೊಡಗು: ರಸ್ತೆ ಬದಿ ಸ್ನೇಹಿತನ ಜೊತೆ ಮಾತನಾಡುತ್ತಿದ್ದ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಪಂಚಾಯತಿ ಸದಸ್ಯ ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಹರಿಶ್ಚಂದ್ರ ಪುರದಲ್ಲಿ ತಡರಾತ್ರಿ ನಡೆದಿದೆ. ಗೊಣಿಕೊಪ್ಪಲು ಗ್ರಾಮ ಪಂಚಾಯಿತಿ ಸದಸ್ಯ ಕಲೀಮುಲ್ಲಾ ಮೃತ ವ್ಯಕ್ತಿ. ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪ ರಸ್ತೆಬದಿ ಸ್ನೇಹಿತರ ಜೊತೆ ಮಾತನಾಡುತ್ತಿದ್ದ ವೇಳೆ ಏಕಾಏಕಿ ಕಾರು ಡಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡಿದ್ದ ಕಲೀಮುಲ್ಲಾ ಅವರನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಕಲೀಮುಲ್ಲಾ ಮತ್ತೊಬ್ಬ ಸ್ನೇಹಿತನಿಗೂ ಚಿಕ್ಕ,ಪುಟ್ಟ ಗಾಯಗಳಾಗಿವೆ.ಚಾಲಕ ಕಾರು ನಿಲ್ಲಿಸದೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ಸಂಬಂಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಬದಿ ನಿಂತವರಿಗೆ ಕಾರುಡಿಕ್ಕಿ ವ್ಯಕ್ತಿ ಸಾವು;ಸ್ನೇಹಿತನಿಗೆ ಗಾಯ

No comments
Post a Comment