ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ; ಜಿಲ್ಲಾಧಿಕಾರಿ ಸೂಚನೆ


 ಮಡಿಕೇರಿ: ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ 20 ರಿಂದ ಜಿಲ್ಲೆಯಲ್ಲಿ ಸಾಧರಣ ಮುಂಗರು ಮಳೆ ಅರಂಭವಾಗಲ್ಲಿದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೇಚ್ಚರಿಕೆ ಕ್ರಮಕೈಗೊಂಡು ಜೂನ್ 19 ರಿಂದ ಸಕಲ ಸನ್ನದ್ಧರಾಗಿ ಹಾಗೂ ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಜಿಲ್ಲೆಯ ಸೂಕ್ಷ್ಮ ಪ್ರದೆಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗೃತೆ ದೃಷ್ಟಿಯಿಂದ ಪುರ್ನವಸತಿ ಕೆಂದ್ರಗಳಿಗೆ ಸ್ಥಳಾತರಿಸಲು ಅಗತ್ಯ ಕ್ರಮಕೈಗೊಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತುರ್ತು ಪರಿಹಾರ ಕಾರ್ಯ ಹಾಗೂ ಮುಂಜಾಗೃತೆ ಕ್ರಮಗಳ ನೊಡಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನೆಡೆದ ನೊಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಡಿದ ಜಿಲ್ಲಾಧಿಕರಿ ಅನೀಸ್

ಕಣ್ಮಣಿ ಜಾಯ್ ಅವರು ಪುನರ್ವಸತಿ ಸಂಬಂಧ ಪ್ರಥಮ ಹಾಗು ದ್ವಿತೀಯ ಪಟ್ಟಿಯಲ್ಲಿರುವ ಅರ್ಹ ಪಲನುಭವಿಗಳಿಗೆ ಮುಂದಿನ ಮೂರು ತಿಂಗಳಿಗೆ ಅವಶ್ಯವಿರುವ ಮನೆ ಬಾಡಿಗೆ ಹಣವನ್ನು ಎರಡು ದಿನಗಳಲ್ಲಿ ಪವತಿಸಲು ಕ್ರಮಕೈಗೊಂಡು ವರದಿ ನಿಡುವಂತೆ ಉಪವಿಭಾಗಧಿಕಾರಿ ಹಾಗು ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರಿಗೆ ಸೂಚನೆ ನೀಡಿದರು. ಈಗಗಲೇ ಗುರುತಿಸಿರುವ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೆಶದಲ್ಲಿನ ಜನರಿಗೆ ಸುರಕ್ಷತ ದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗುವ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವುದು ಹಾಗೂ ಈ ಪ್ರದೇಶಗಳಲ್ಲಿವಾಸಿಸುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿನಿಲಯಗಳಲ್ಲಿ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು. ಮಳೆಯಿಂದ ಉಂಟಾಗಬಹುದಾದಂತಹ ಅನಾಹುತಗಳನ್ನು ಸಮರ್ಥವಾಗಿ ತಡೆಯು ನಿಟ್ಟಿನಲ್ಲಿ ಅಗತ್ಯವಿರುವ ಜೀವ ರಕ್ಷಕ ಜಾಕೇಟ್, ರೈನ್‍ಕೊಟ್, ಟಾರ್ಪಲ್‍ಗಳ ದಾಸ್ತಾನು ಮಾಡಿಕೊಂಡು ಅಗತ್ಯ ಬಿದ್ದಲ್ಲಿ ಬಳಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಸೂಕ್ಷ್ಮ ಪ್ರದೇಶಗಳಲ್ಲಿನ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ರೋಗಿಗಳನ್ನು ಮುನ್ನೇಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ನೂಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕೃತಿ ವಿಕೋಪದಿಂದ ಸಂಭವಿಸಬಹುದಾದ ಅನಾಹುತಗಳನ್ನು ಸಮರ್ಥವಾಗಿ ನಿರ್ವಹಿಸಲು ನೂಡಲ್ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರವು ಸಾರ್ವಜನಿಕರಿಗೆ ಅನುಕೂಲಕರವಾಗಿರಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಬರೆ ಕುಸಿತ ಸಂಭವಿಸಬಹುದಾದಂತಹ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾದಾಗ ತೆರವು ಕಾರ್ಯಾಚರಣೆ ನಡೆಸಲು ಅವಶ್ಯವಿರುವ ಹಿಟಾಚಿ, ಜೆಸಿಬಿಗಳನ್ನು ಸನ್ನದ್ದವಾಗಿ ಇಟ್ಟುಕೊಂಡು ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಅವರು ಮತನಾಡಿ ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ನೂಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ತುರ್ತು ಸೇವೆಗಳಿಗೆ ಅವಶ್ಯವಿರುವ ವಾಹನಗಳನ್ನು ಸನ್ನದ್ಧವಾಗಿರಿಸಿಕೊಳ್ಳಲು ಸೂಚನೆ ನೀಡಿದರು. ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೇಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಕುರಿತ ಬಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮಣಿ ಜಾಯ್ ಅವರು ಅನಾವರಣಗೊಳಿಸಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿ.ಪಂ ಯೋಜನಾ ನಿರ್ದೇಶಕರಾದ ಗುಡೂರು ಭೀಮಸೇನ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಶಂಷುದ್ದೀನ್, ತಹಶೀಲ್ದಾರರು, ತಾ.ಪಂ. ಇಒ, ಇತರರು ಇದ್ದರು.