ಕೊಡಗು: ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರವಾಗಿ ಮಾಜಿ ಸಚಿವ ಎ.ಮಂಜು ಗುಡುಗಿದ್ದು, ಅಪ್ಪ-ಮಕ್ಕಳ ಜೊತೆ ಯಾರೂ ಇರೋಕಾಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಉಸಿರುಗಟ್ಟುವ ವಾತವಾರಣವಿದೆ. ಅಧಿಕಾರವಿರಬಹುದು ಅಥವಾ ಇನ್ನೊಂದು ಇರಬಹುದು ಕೇವಲ ಅವರ ಕುಟುಂಬಕ್ಕೆ ಮಾತ್ರ ಸೀಮಿತ ಮಾಡಿಕೊಳ್ತಾರೆ. ಅರ್ಹತೆ ಇರೋರಿಗೆ ಯಾರಿಗೂ ಅಧಿಕಾರ ಕೊಡಲ್ಲ ಎಂದು ಆರೋಪಿಸಿದ್ದಾರೆ.

ಅಧಿಕಾರವಿಲ್ಲದೇ ಅಧ್ಯಕ್ಷನಾಗಿಯೂ ಜವಾಬ್ದಾರಿ ನಿರ್ವಹಿಸಲು ಆಗದ ಹಿನ್ನೆಲೆಯಲ್ಲಿ ಮನನೊಂದು ವಿಶ್ವನಾಥ್ ರಾಜೀನಾಮೆ ಕೊಟ್ಟಿದ್ದಾರೆ ಅಂತಾ ನನಗೆ ಅನಿಸುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಜೀ ಹೂಜೂರ್ಗಳಿಗೆ ಮಾತ್ರ ಅವಕಾಶ ಸಿಗ್ತಿದೆ. ಅಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡೋರಿಗೆ, ಹಿರಿಯರಿಗೆ ಗೌರವ ಸಿಗ್ತಿಲ್ಲ. ನಿಜವಾಗಿ ಪಕ್ಷ ಕಟ್ಟೋರಿಗೆ ಪಕ್ಷ ಬೆಳೆಸುವಂತವರಿಗೆ ಸ್ಥಾನಮಾನ ಕೊಡಲ್ಲ ಎಂದು ಕಿಡಿಕಾರಿದ್ದಾರೆ.
ಮೈತ್ರಿ ಸರ್ಕಾರವನ್ನ ನಾವು ಕೆಡಲು ಹೋಗೋದಿಲ್ಲ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆದುಕೊಂಡಿದೆ. ಸಿಎಂ ಕುಮಾರಸ್ವಾಮಿ ಅವರೇ ನೈತಿಕವಾಗಿ ರಾಜೀನಾಮೆ ಕೊಟ್ಟು ಹೋಗೋದು ಒಳ್ಳೇದು. ನಾವ್ಯಾರೂ ಸರ್ಕಾರವನ್ನ ಕೆಡುವುದಿಲ್ಲ. ಅವರೇ ಕೆಡವಿಕೊಳ್ತಾರೆ ಎಂದರು.

No comments
Post a Comment